ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾದಿಂದ ಇಂದು ಆರು ಜನರು ಮೃತಪಟ್ಟಿದ್ದಾರೆ. ಸತತ 3 ದಿನಗಳಿಂದ ಜಿಲ್ಲೆಯಲ್ಲಿ ದಿನಕ್ಕೆ 6 ಜನ ಕೊರೊನಾದಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾಗೆ 58 ಜನರು ಸಾವನ್ನಪ್ಪಿದ್ದಾರೆ.
ಬೆಳಗಾವಿಯಲ್ಲಿ ಇಂದು 228 ಜನರಿಗೆ ಕೊರೊನಾ ದೃಢ, 6 ಜನ ಸಾವು - Belagavi Covid-19 latest news
ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,532 ಕ್ಕೆ ಏರಿಕೆಯಾಗಿದ್ದು, ಕೊರೊನಾದಿಂದ ಇಂದು ಆರು ಜನರು ಮೃತಪಟ್ಟಿದ್ದಾರೆ.
ಬೆಳಗಾವಿ ಕೋವಿಡ್ -19 ಲೇಟೆಸ್ಟ್ ನ್ಯೂಸ್
ಇಂದು ಒಂದೇ ದಿನ 228 ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,532 ಕ್ಕೆ ಏರಿಕೆಯಾಗಿದೆ. ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 34 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 714 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಸದ್ಯ 1,760 ಸಕ್ರಿಯ ಕೊರೊನಾ ಪ್ರಕರಣಗಳಿವೆ.