ಬೆಳಗಾವಿ: ಮಹಾರಾಷ್ಟ್ರದಿಂದ ಮರಳಿದ್ದ 32 ವರ್ಷದ ಮಹಿಳೆಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 303ಕ್ಕೆ ಏರಿಕೆಯಾಗಿದೆ.
ಬೆಳಗಾವಿಯಲ್ಲಿ ಇಂದು 62 ಸೋಂಕಿತರು ಗುಣಮುಖ: ಮಹಿಳೆಯಲ್ಲಿ ಕೊರೊನಾ ಪತ್ತೆ
ಮಹಾರಾಷ್ಟ್ರದಿಂದ ಆಗಮಿಸಿದ್ದ ಮಹಿಳೆಯನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದ್ದು, ಇಂದು ಆ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ. ಚಿಕಿತ್ಸೆ ಪಡೆಯುತ್ತಿದ್ದ 68 ಮಂದಿ ಸೋಂಕಿತರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
Belagavi corona case
ಇತ್ತೀಚೆಗೆ ಮಹಾರಾಷ್ಟ್ರದಿಂದ ಆಗಮಿಸಿದ್ದ ಮಹಿಳೆಯನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿತ್ತು. ಇಂದು ಆ ಮಹಿಳೆಯಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆ ಕೋವಿಡ್ ವಾರ್ಡ್ಗೆ ಶಿಫ್ಟ್ ಮಾಡಲಾಯಿತು.
ಕೋವಿಡ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 68 ಮಂದಿ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಓರ್ವ ಸೋಂಕಿತ ವೃದ್ಧೆ ಸಾವನ್ನಪ್ಪಿದ್ದು, 217 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 85 ಕೊರೊನಾ ಸಕ್ರಿಯ ಪ್ರಕರಣಗಳಿವೆ.