ಕರ್ನಾಟಕ

karnataka

ETV Bharat / state

ಬೆಳಗಾವಿ ರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ತಲಾ 7 ಲಕ್ಷ ರೂ. ಪರಿಹಾರ ಘೋಷಣೆ - belagavi accident

ಬೆಳಗಾವಿ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 7 ಲಕ್ಷ ರೂ. ಪರಿಹಾರ ಕೊಡಲಾಗುವುದು ಮತ್ತು ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

CM Basavaraja bommai
ಸಿಎಂ ಬಸವರಾಜ ಬೊಮ್ಮಾಯಿ

By

Published : Jun 26, 2022, 12:53 PM IST

Updated : Jun 26, 2022, 1:12 PM IST

ಬೆಳಗಾವಿ: ತಾಲೂಕಿನ ಕಲ್ಯಾಳ್ ಬ್ರಿಡ್ಜ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ. ಹಾಗೂ ಜಿಲ್ಲಾಡಳಿತದಿಂದ 2 ಲಕ್ಷ ರೂ. ಪರಿಹಾರ ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.


ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದು ಅನೇಕರಿಗೆ ಗಾಯಗಳಾಗಿರುವ ಬಗ್ಗೆ ಮಾಹಿತಿ ಬಂದಿದೆ. ಮೃತರೆಲ್ಲರೂ ಕೂಲಿ ಕಾರ್ಮಿಕರು. ಸರ್ಕಾರದಿಂದ ಮೃತರ ಕುಟುಂಬಸ್ಥರಿಗೆ ಪರಿಹಾರ ತಲುಪಿಸಲಾಗುವುದು, ಜೊತೆಗೆ ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸಲಾಗುವುದು ಎಂದರು.

ಇದನ್ನೂ ಓದಿ:ಬೆಳಗಾವಿ: ಭೀಕರ ರಸ್ತೆ ಅಪಘಾತದಲ್ಲಿ 7 ಜನರ ದುರ್ಮರಣ

Last Updated : Jun 26, 2022, 1:12 PM IST

ABOUT THE AUTHOR

...view details