ಕಾರ್ಮಿಕ ಇಲಾಖೆಯಿಂದ ರೆಡ್ ಕ್ರಾಸ್ ಸಂಸ್ಥೆಗೆ 8 ಲಕ್ಷ ರೂ. ಅನುದಾನ - ಕಾರ್ಮಿಕ ಇಲಾಖೆಯಿಂದ ಅಸಂಘಟಿತ ಕಾರ್ಮಿಕರಿಗೆ ಅನುದಾನ
ಕಟ್ಟಡ ಕಾರ್ಮಿಕರು ಹಾಗೂ ಅಸಂಘಟಿತ ವಲಯದ ಕಾರ್ಮಿಕರಿಗೆ ಸ್ಯಾನಿಟೈಸರ್, ಮಾಸ್ಕ್ ಖರೀದಿಸಲು ಕಾರ್ಮಿಕ ಇಲಾಖೆಯಿಂದ ರೆಡ್ ಕ್ರಾಸ್ ಸಂಸ್ಥೆಗೆ 8 ಲಕ್ಷ ರೂ.ಗಳ ಚೆಕ್ ವಿತರಿಸಲಾಯಿತು.
ಬೆಳಗಾವಿ: ಕೋವಿಡ್-19 ಹಿನ್ನೆಲೆಯಲ್ಲಿ ಜಿಲ್ಲೆಯ ಕಟ್ಟಡ ಕಾರ್ಮಿಕರು ಹಾಗೂ ಅಸಂಘಟಿತ ವಲಯದ ಕಾರ್ಮಿಕರಿಗೆ ಸ್ಯಾನಿಟೈಸರ್, ಮಾಸ್ಕ್ ಖರೀದಿಸಲು ಕಾರ್ಮಿಕ ಇಲಾಖೆಯಿಂದ ರೆಡ್ ಕ್ರಾಸ್ ಸಂಸ್ಥೆಗೆ 8 ಲಕ್ಷ ರೂ.ಗಳ ಚೆಕ್ ವಿತರಿಸಲಾಯಿತು.
ಶಾಸಕ ಅನಿಲ್ ಬೆನಕೆ ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧಿಕಾರಿ ಡಾ. ಬೊಮ್ಮನಹಳ್ಳಿ ಅವರ ಮೂಲಕ ರೆಡ್ ಕ್ರಾಸ್ ಸಂಸ್ಥೆಗೆ ಚೆಕ್ ಹಸ್ತಾಂತರಿಸಿದರು. ಈ ಸಂದರ್ಭ ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷ, ಜಿಪಂ ಸಿಇಒ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಶಾಖೆಯ ಅಧ್ಯಕ್ಷ ಅಶೋಕ ಬಾದಾಮಿ, ಕಾರ್ಯದರ್ಶಿ ಡಾ. ಡಿ.ಎನ್.ಮಿಸಾಳೆ, ಕಾರ್ಮಿಕ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ ಜೋಗೂರ, ಕಾರ್ಮಿಕ ನಿರೀಕ್ಷಕ ಅನಿಲ್ ಬಗಟಿ ಮತ್ತಿತರರು ಉಪಸ್ಥಿತರಿದ್ದರು.