ಕರ್ನಾಟಕ

karnataka

ETV Bharat / state

ಹಾನಿಗೊಳಗಾದ ಮನೆಗಳಿಗೆ 924ಕೋಟಿ ರೂ. ಪರಿಹಾರ ವಿತರಣೆ: ಸಚಿವ ಗೋವಿಂದ ಕಾರಜೋಳ - Notification for crop damage drone survey

ಕಳೆದ ಮೂರು ವರ್ಷಗಳಲ್ಲಿ ಪ್ರವಾಹದಿಂದ ಹಾನಿಗೊಳಗಾದ 75,023 ಮನೆಗಳಿಗೆ ಇದುವರೆಗೆ ಒಟ್ಟಾರೆ 924 ಕೋಟಿ ರೂಪಾಯಿ ಪರಿಹಾರವನ್ನು ನೀಡಲಾಗಿರುತ್ತದೆ. ಆದಾಗ್ಯೂ ಕೆಲವು ಮನೆಗಳಿಗೆ ಪರಿಹಾರ ದೊರೆತಿಲ್ಲ ಎಂದಾದರೆ ಅಂತಹ ಕುಟುಂಬಗಳಿಗೂ ಪರಿಹಾರ ನೀಡಲಾಗುವುದು ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

Minister Govinda Karajola
ಅತಿವೃಷ್ಟಿ ಹಾಗೂ ಪ್ರವಾಹ ಮುಂಜಾಗ್ರತೆ ಕುರಿತು ಸಭೆ

By

Published : Jul 18, 2022, 9:14 PM IST

ಬೆಳಗಾವಿ:ಮಳೆಯಿಂದ ಜಿಲ್ಲೆಯಲ್ಲಿ ಉಂಟಾಗಿರುವ ಬೆಳೆ ಹಾಗೂ ಮನೆ ಹಾನಿಯ ಬಗ್ಗೆ ನಿಖರವಾಗಿ ಸಮೀಕ್ಷೆ ನಡೆಸಬೇಕು. ಅಲ್ಲದೇ ತಕ್ಷಣವೇ ಪರಿಹಾರವನ್ನು ನೀಡಲು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಚಿಕ್ಕೋಡಿ ಪಟ್ಟಣದಲ್ಲಿ ಅತಿವೃಷ್ಟಿ ಹಾಗೂ ಪ್ರವಾಹ ಮುಂಜಾಗ್ರತೆ ಕುರಿತು ಸಭೆ ನಡೆಸಲಾಯಿತು.

ಈ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಳೆಯಿಂದ 877 ಹೆಕ್ಟೇರ್ ಪ್ರದೇಶ ಜಲಾವೃತಗೊಂಡಿದೆ. ನೀರು ಸುರಿದ ಬಳಿಕ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಬೇಕು. ಇದಲ್ಲದೇ ಹಾನಿಗೊಳಗಾಗಿರುವ ಒಟ್ಟಾರೆ 775 ಮನೆಗಳಿಗೂ ಕೂಡ ಮಾರ್ಗಸೂಚಿ ಪ್ರಕಾರ ತಕ್ಷಣವೇ ಪರಿಹಾರವನ್ನು ನೀಡಬೇಕು ಎಂದು ಸೂಚಿಸಿದರು.

ಅತಿವೃಷ್ಟಿ ಹಾಗೂ ಪ್ರವಾಹ ಮುಂಜಾಗ್ರತೆ ಕುರಿತು ಸಭೆ

ಮಹಾರಾಷ್ಟ್ರದಲ್ಲಿ ಇದುವರೆಗೆ ಎಲ್ಲ ಜಲಾಶಯಗಳು ಸರಾಸರಿ ಶೇ.60ರಷ್ಟು ಮಾತ್ರ ಭರ್ತಿಯಾಗಿರುತ್ತವೆ. ಆಲಮಟ್ಟಿ ಜಲಾಶಯದಿ‌ಂದ ಕೂಡ ಪರಿಸ್ಥಿತಿ ಆಧರಿಸಿ 1.25 ಲಕ್ಷ ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ಸಂಭವನೀಯ ಪ್ರವಾಹ ಹಿನ್ನೆಲೆ ರಚಿಸಲಾಗಿರುವ ತಂಡಗಳು ಹಾಗೂ ನೋಡಲ್ ಅಧಿಕಾರಿಗಳು ತಮಗೆ ವಹಿಸಲಾದ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಬೇಕು. ಯಾವುದೇ ಅಧಿಕಾರಿಗಳಿಗೂ ರಜೆ ನೀಡಬಾರದು ಎಂದು ತಿಳಿಸಿದರು.

ಇದನ್ನೂ ಓದಿ:ಸಾತ್ನಾಳಿ-ಮಾಚಾಳಿ ಗ್ರಾಮದ ಸೇತುವೆ ಮುಳುಗಡೆ.. ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರ ಒತ್ತಾಯ

924ಕೋಟಿ ರೂ. ಪರಿಹಾರ ವಿತರಣೆ:ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಪ್ರವಾಹದಿಂದ ಹಾನಿಗೊಳಗಾದ 75,023 ಮನೆಗಳಿಗೆ ಇದುವರೆಗೆ ಒಟ್ಟಾರೆ 924 ಕೋಟಿ ರೂಪಾಯಿ ಪರಿಹಾರವನ್ನು ನೀಡಲಾಗಿರುತ್ತದೆ. ಆದಾಗ್ಯೂ ಕೆಲವು ಮನೆಗಳಿಗೆ ಪರಿಹಾರ ದೊರೆತಿಲ್ಲ ಎಂದಾದರೆ ಅಂತಹ ಕುಟುಂಬಗಳಿಗೂ ಪರಿಹಾರ ನೀಡಲಾಗುವುದು.

ಈ ನಿಟ್ಟಿನಲ್ಲಿ ಅಧಿಕಾರಿಗಳು ಸಮರ್ಪಕವಾಗಿ ಸಮೀಕ್ಷೆ ನಡೆಸಬೇಕು. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 28 ಕೋಟಿ ಹಾಗೂ ಎಲ್ಲ ತಹಶೀಲ್ದಾರ್​ ಖಾತೆಯಲ್ಲಿ 30 ಕೋಟಿ ಸೇರಿದಂತೆ 58 ಕೋಟಿ ರೂಪಾಯಿ ಲಭ್ಯವಿದೆ. ತಕ್ಷಣವೇ ಪರಿಹಾರ ಕಾರ್ಯ ಕೈಗೊಳ್ಳಲು ಯಾವುದೇ ತೊಂದರೆ ಇರುವುದಿಲ್ಲ ಎಂದು ಸಚಿವರು ತಿಳಿಸಿದರು.

ಮನೆಹಾನಿ ವಸ್ತುನಿಷ್ಠ ಸಮೀಕ್ಷೆಗೆ ಸೂಚನೆ: ಮನೆಹಾನಿಯ ಸಮೀಕ್ಷೆಯನ್ನು ವಸ್ತುನಿಷ್ಠವಾಗಿ ಮಾಡಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ತಂಡವನ್ನು ರಚಿಸಬೇಕು. ಜನರಿಂದ ಯಾವುದೇ ದೂರುಗಳು ಬಾರದಂತೆ ನಿಖರವಾಗಿ ಸಮೀಕ್ಷೆ ನಡೆಸಬೇಕು. ಮುಳುಗಡೆಯಾಗುವ ಸೇತುವೆಗಳನ್ನು ನೀರು ಹರಿವು ಪ್ರಮಾಣವನ್ನು ಆಧರಿಸಿ ಅವುಗಳನ್ನು ವಿಸ್ತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಬೆಳೆಹಾನಿ ಡ್ರೋಣ್ ಸಮೀಕ್ಷೆಗೆ ಸೂಚನೆ: ಬೆಳೆಹಾನಿ ಕುರಿತು ಮೊದಲು ಡ್ರೋಣ್ ಮೂಲಕ ಸಮೀಕ್ಷೆ ನಡೆಸಬೇಕು. ನೀರು ಸರಿದ ಬಳಿಕ ಕ್ಷೇತ್ರ ಭೇಟಿ ನೀಡಿ ನಿಯಮಾವಳಿ ಪ್ರಕಾರ ಹಾನಿ ಕುರಿತು ಸಮೀಕ್ಷೆ ಕೈಗೊಳ್ಳಬೇಕು ಎಂದು ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಸಚಿವ ಗೋವಿಂದ ಕಾರಜೋಳ ಅವರು ನಿರ್ದೇಶನ ನೀಡಿದರು.

ರಸ್ತೆಗಳು ಹಾಳಾಗಿದ್ದರೆ ಎನ್​​​ಆರ್​ಇಜಿ ಯೋಜನೆಯಡಿ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್​ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.

ABOUT THE AUTHOR

...view details