ಗೋಕಾಕ(ಬೆಳಗಾವಿ):ಸ್ನೇಹಿತರೊಂದಿಗೆ ನದಿಯಲ್ಲಿ ಈಜಲು ತೆರಳಿದ್ದ ಬಾಲಕನೊಬ್ಬ ನೀರು ಪಾಲಾಗಿರುವ ಘಟನೆ ಕೊಣ್ಣೂರು ಗ್ರಾಮದಲ್ಲಿ ನಡೆದಿದೆ.
ಗೋಕಾಕ್: ಸ್ನೇಹಿತರೊಂದಿಗೆ ನದಿಗೆ ಈಜಲು ತೆರಳಿದ ಬಾಲಕ ಸಾವು - ಘಟಪ್ರಭಾ ನದಿ
ಸ್ನೇಹಿತರ ಜೊತೆಗೂಡಿ ಘಟಪ್ರಭಾ ನದಿಗೆ ಈಜಲು ಹೋಗಿದ್ದ ಬಾಲಕ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿರುವ ಘಟನೆ ಗೋಕಾಕ್ ತಾಲೂಕಿನಲ್ಲಿ ನಡೆದಿದೆ.
ಗೋಕಾಕ್ ತಾಲೂಕಿನ ಕೊಣ್ಣೂರ ಗ್ರಾಮದ ಫರೀದ್ ಅಸ್ಲಂ ದೌದಾಗರ (16) ಮೃತ ಬಾಲಕ. ಈತ ಸ್ನೇಹಿತರ ಜೊತೆಗೂಡಿ ಘಟಪ್ರಭಾ ನದಿಗೆ ಈಜಲು ಹೋಗಿದ್ದ. ಈತನಿಗೆ ಅಷ್ಟಾಗಿ ಈಜಲು ಬಾರದೇ ಇರುವುದರಿಂದ ನದಿಯ ದಡದಲ್ಲಿ ಕುಳಿತು ಸ್ನಾನ ಮಾಡುತ್ತಿದ್ದ. ಈ ವೇಳೆ, ನದಿ ನೀರಿನ ನೀರಿನ ಸೆಳೆತಕ್ಕೆ ಬಾಲಕ ಆಯತಪ್ಪಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.
ನೀರಿನ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಬಾಲಕನನ್ನು ನೋಡಿದ ಸ್ಥಳೀಯರು ಆತನನ್ನು ರಕ್ಷಿಸಿದ್ದರು. ಆದ್ರೆ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾನೆ. ಗೋಕಾಕ್ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.