ಬೆಳಗಾವಿ:ಸಾಮಾಜಿಕ ಜಾಲತಾಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ವಿಶ್ವಹಿಂದು ಪರಿಷತ್-ಬಜರಂಗದಳ ಸೇರಿದಂತೆ ವಿವಿಧ ಸಂಘಟನೆಗಳ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪೀರನವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿ ವಿವಾದ ಸೌಹಾರ್ದಯುತವಾಗಿ ಬಗೆಹರಿದಿದ್ದರೂ ಕೂಡ ಒಂದಿಷ್ಟು ಕಿಡಿಗೇಡಿಗಳು ಶಿವಾಜಿ ಮಹಾರಾಜರ ಬಗ್ಗೆ ಅವಹೇಳನಕಾರಿಯಾಗಿ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕುತ್ತಿರೋ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕೆಂದು ಆಗ್ರಹಿಸಿದರು.