ಬೆಳಗಾವಿ:ಜಿಲ್ಲೆಯ ವಡಗಾವಿಯ ನಾಜರ್ ಕ್ಯಾಂಪ್ ಬಳಿ 40 ಅಡಿ ಆಳದ ತೆರೆದ ಬಾವಿಗೆ ಬಿದ್ದ ಶ್ವಾನವನ್ನು ಸುರಕ್ಷಿತವಾಗಿ ಮೇಲೆ ಎತ್ತಲಾಗಿದೆ.
40 ಅಡಿ ಆಳದ ತೆರೆದ ಬಾವಿಗೆ ಬಿದ್ದ ಶ್ವಾನ: ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ - ಬೆಳಗಾವಿ ಜಿಲ್ಲೆಯ ವಡಗಾವಿಯ ನಾಜರ್ ಕ್ಯಾಂಪ್
ಬೆಳಗಾವಿ ಜಿಲ್ಲೆಯ ವಡಗಾವಿಯ ನಾಜರ್ ಕ್ಯಾಂಪ್ ಬಳಿ ಬಾವಿಗೆ ಬಿದ್ದ ಶ್ವಾನವನ್ನು,ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ.
ಕಾಲುಜಾರಿ ಬಾವಿಯಲ್ಲಿ ಬಿದ್ದ ನಾಯಿ ಚೀರಾಡತೊಡಗಿದ್ದನ್ನು ಗಮನಿಸಿದ ಸ್ಥಳೀಯರು , ಬೆಳಗಾವಿ ಅನಿಮಲ್ ವೆಲ್‌ಫೇರ್ ಅಸೋಸಿಯೇಷನ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ರಕ್ಷಣಾ ಸಾಮಗ್ರಿ ಜತೆ ಸ್ಥಳಕ್ಕೆ ಆಗಮಿಸಿದ್ದ ಸಂಸ್ಥೆ ಸದಸ್ಯರು ರಕ್ಷಣೆಗೆ ಪ್ರಯತ್ನಿಸಿದ್ದಾರೆ. ಈ ವೇಳೆ ರಕ್ಷಣಾ ಕಾರ್ಯ ವಿಫವಾದ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ನಾಯಿಯನ್ನು ರಕ್ಷಿಸಿದ್ದಾರೆ. ಬಾವಾ ಸಂಸ್ಥೆ, ಅಗ್ನಿಶಾಮಕ ಸಿಬ್ಬಂದಿಯ ಮಾನವೀಯತೆಗೆ ಪ್ರಶಂಸೆ ವ್ಯಕ್ತಪಡಿಸಿರುವ ಸಾರ್ವಜನಿಕರು ತೆರೆದ ಬಾವಿಗಳನ್ನು ಮುಚ್ಚಲು ಕ್ರಮ ವಹಿಸುವಂತೆ ಆಗ್ರಹಿಸಿದ್ದಾರೆ.