ಬೆಳಗಾವಿ: ಭಾರಿ ಮಳೆಗೆ ಮನೆ ಕುಸಿದು ಒಂದೇ ಕುಟುಂಬದ ಏಳು ಮಂದಿ ದುರ್ಮರಣ ಹೊಂದಿರುವ ಘಟನೆ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ನಡೆದಿದ್ದು, ಸ್ಥಳಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿದ್ದಾರೆ.
FLASH NEWS: ಮನೆ ಕುಸಿದು 7 ಜನ ಸಾವು: ಸ್ಥಳಕ್ಕೆ ದೌಡಾಯಿಸಿದ ಶಾಸಕಿ ಹೆಬ್ಬಾಳ್ಕರ್ - Lakshmi Hebbalkar on the spot
ಇಂದು ಸಂಜೆ ಸುರಿದ ಮಳೆಗೆ ಮನೆ ಕುಸಿದಿದೆ. ಮನೆಯಲ್ಲಿದ್ದ ಐವರು ದುರ್ಮರಣ ಹೊಂದಿದ್ದು, ಅವಶೇಷಗಳಡಿ ಸಿಲುಕಿದ್ದ ಮೂವರನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮನೆ ಕುಸಿದಿದ್ದರಿಂದ ಐವರು ಸ್ಥಳದಲ್ಲೇ ಮೃತಪಟ್ಟಿದ್ದರು.
![FLASH NEWS: ಮನೆ ಕುಸಿದು 7 ಜನ ಸಾವು: ಸ್ಥಳಕ್ಕೆ ದೌಡಾಯಿಸಿದ ಶಾಸಕಿ ಹೆಬ್ಬಾಳ್ಕರ್ A house collapsed in Belagavi distrcit 7 died and one severely injured](https://etvbharatimages.akamaized.net/etvbharat/prod-images/768-512-13280992-thumbnail-3x2-nin.jpg)
ಇಂದು ಸಂಜೆ ಸುರಿದ ಮಳೆಗೆ ಮನೆ ಕುಸಿದಿದೆ. ಮನೆಯಲ್ಲಿದ್ದ ಐವರು ದುರ್ಮರಣ ಹೊಂದಿದ್ದು, ಅವಶೇಷಗಳಡಿ ಸಿಲುಕಿದ್ದ ಮೂವರನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮನೆ ಕುಸಿದಿದ್ದರಿಂದ ಐವರು ಸ್ಥಳದಲ್ಲೇ ಮೃತಪಟ್ಟಿದ್ದರು. ಮೃತರಲ್ಲಿ ಮೂವರು ಮಕ್ಕಳು ಸೇರಿದ್ದಾರೆ.
ಇನ್ನು ಅಂಕಲಗಿ ಗ್ರಾಮಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿ ಸಂಬಂಧಿಕರಿಗೆ ಸಾಂತ್ವನ ಹೇಳಿದ್ದಾರೆ. ಶವ ಹೊರತೆಗೆಯುವ ಕಾರ್ಯಾಚರಣೆಗೆ ಸಿದ್ಧತೆ ಮಾಡುತ್ತಿದ್ದು, ಸ್ಥಳೀಯ ಅಧಿಕಾರಿಗಳ ಜೊತೆಗೆ ಹೆಬ್ಬಾಳ್ಕರ್ ಚರ್ಚೆ ನಡೆಸಿದ್ದಾರೆ. ಸ್ಥಳದಲ್ಲೇ ಠಿಕಾಣಿ ಹೂಡಿರುವ ಹೆಬ್ಬಾಳ್ಕರ್ ಕಾರ್ಯಾಚರಣೆಗೆ ಕೈ ಜೋಡಿಸಿದ್ದಾರೆ.