ಬೆಳಗಾವಿ: ನಗರದಲ್ಲಿ ಮತ್ತೊಂದು ಬೃಹತ್ ಮರವೊಂದು ಧರೆಗುರುಳಿದ್ದು, ಸಂಭವನೀಯ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ. ಆರ್‌ಟಿಒ ವೃತ್ತದಿಂದ ಬಸ್ ನಿಲ್ದಾಣಕ್ಕೆ ಹೊರಟಿದ್ದ ಬಸ್ ಸ್ವಲ್ಪದರಲ್ಲೇ ಅವಘಡದಿಂದ ಪಾರಾಗಿದೆ.
ಇಲ್ಲಿನ ಅರಣ್ಯ ಇಲಾಖೆಯ ಆವರಣದಲ್ಲಿರುವ ಬೃಹತ್ ಮರ ಬಿದ್ದಿದ್ದು, ಎರಡು ಆಟೋ, ಒಂದು ಇನ್ನೋವಾ ಕಾರು ಸಂಪೂರ್ಣ ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು ದೌಡಾಯಿಸಿದ್ದು, ರಸ್ತೆ ಮೇಲೆ ಬಿದ್ದಿದ್ದ ಮರವನ್ನು ಅರಣ್ಯ ಇಲಾಖೆ ಸಿಬ್ಬಂದಿ ತೆರವು ಮಾಡಿದ್ದಾರೆ.