ಚಿಕ್ಕೋಡಿ: ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಗೋಡೆ ಕುಸಿದಿದ್ದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಹುಕ್ಕೇರಿ ತಾಲೂಕಿನ ಅರಳಿಕಟ್ಟಿ ಗ್ರಾಮದಲ್ಲಿ ನಡೆದಿದೆ.
ಭಾರಿ ಮಳೆಗೆ ಗೋಡೆ ಕುಸಿತ: ವ್ಯಕ್ತಿ ಸಾವು - Heavy rain
ಚಿಕ್ಕೋಡಿಯಲ್ಲಿ ನಿನ್ನೆ ರಾತ್ರಿ ಭಾರಿ ಮಳೆ ಸುರಿದಿದೆ. ಮಳೆ-ಗಾಳಿಯಿಂದ ಗೋಡೆ ಕುಸಿದಿದ್ದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ.

ಮಳೆಗೆ ಗೋಡೆ ಕುಸಿತ
ಸತ್ಯಪ್ಪಾ ಬಡಗುರೆ (60) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ರಾತ್ರಿ ಸುರಿದ ಭಾರಿ ಮಳೆಯಿಂದ ಹೊರಗೆ ಕಟ್ಟಿದ್ದ ದನಗಳನ್ನು ಕೊಟ್ಟಿಗೆಯಲ್ಲಿ ಕಟ್ಟಲು ಹೋಗಿದ್ದರು. ಈ ವೇಳೆ ಮೈಮೇಲೆ ಗೋಡೆ ಕುಸಿದಿದ್ದರಿಂದ ಸತ್ಯಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ.
ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.