ಚಿಕ್ಕೋಡಿ: ಕೃಷ್ಣಾ ನದಿಯ ಪ್ರವಾಹಕ್ಕೆ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳಿ ಗ್ರಾಮದ ವ್ಯಕ್ತಿವೋರ್ವ ಸಾವನ್ನಪ್ಪಿದ್ದಾನೆ.
ಜಾನುವಾರು ರಕ್ಷಣೆ ಮಾಡಲು ಹೋದ ವ್ಯಕ್ತಿ ಕೃಷ್ಣ ನದಿಪಾಲು - ಕೃಷ್ಣಾ ನದಿಯ ಪ್ರವಾಹ
ಹುಲಗಬಾಳ ಗ್ರಾಮದ ಮಧ್ಯೆ ಕೃಷ್ಣ ನದಿ ನೀರಿನ ಪ್ರವಾಹಕ್ಕೆ ಸಿಲುಕಿ ವ್ಯಕ್ತಿವೋರ್ವ ಸಾವನ್ನಪ್ಪಿದ್ದಾನೆ. ಮೃತನ ಶವ ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿ ವರ್ಷ ಇಂತಹ ಅವಘಡಗಳು ಸಂಭವಿಸುತ್ತವೆ. ಆದ್ರೆ ನಮ್ಮ ಗೋಳನ್ನು ಯಾರೂ ಕೇಳುತ್ತಿಲ್ಲವೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾರುತಿ ಹರಿಬಾ ಜಾಧವ್ (52) ಮೃತ ವ್ಯಕ್ತಿ. ನಿನ್ನೆ ಪ್ರವಾಹ ಹೆಚ್ಚಾಗಿದ್ದರಿಂದ ತನ್ನ ಕುಟುಂಬವನ್ನು ಬೇರೆಡೆಗೆ ಸ್ಥಳಾಂತರಿಸಿದ್ದ. ಆದರೆ, ಜಾನುವಾರುಗಳನ್ನು ಸ್ಥಳಾಂತರಿಸಲಿಲ್ಲ. ಈ ಕಾರಣಕ್ಕೆ ಮತ್ತೆ ಜಾನುವಾರುಗಳನ್ನು ಕಾಪಾಡಲು ಜಲಾವೃತವಾಗಿದ್ದ ತನ್ನ ತೋಟಕ್ಕೆ ಈಜಿಕೊಂಡು ಹೋಗುತ್ತಿರುವಾಗ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದ.
ಇಂದು ಮೃತದೇಹವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಕೃಷ್ಣಾ ನದಿಯಿಂದ ಹೊರತೆಗೆದಿದ್ದಾರೆ. ಇನ್ನು ಹುಲಗಬಾಳ ಗ್ರಾಮದ ಮಧ್ಯೆದಲ್ಲಿ ಮಾರುತಿಯ ಶವ ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿ ವರ್ಷ ಇಂತಹ ಅವಘಡಗಳು ಸಂಭವಿಸುತ್ತಲೇ ಇವೆ. ಇದಕ್ಕೆ ಯಾರು ಜವಾಬ್ದಾರರು. ನಮಗೆ ಪರಿಹಾರ ಕೊಡಿ ಎಂದು ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.