ಬೆಳಗಾವಿ: ಆ್ಯಂಬುಲೆನ್ಸ್ ಪಲ್ಟಿಯಾಗಿ ಕೊರೊನಾ ಸೋಂಕಿತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹುಕ್ಕೇರಿ ಹೊರ ವಲಯದಲ್ಲಿ ನಡೆದಿದೆ. ಅಥಣಿ ಖಾಸಗಿ ಆಸ್ಪತ್ರೆಯಿಂದ ಬೆಳಗಾವಿಗೆ ಆಗಮಿಸುತ್ತಿದ್ದ ಆ್ಯಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಬೆಲ್ಲದ ಬಾಗೇವಾಡಿ ರಸ್ತೆಯಲ್ಲಿ ಅಪಘಾತಕ್ಕೀಡಾಗಿದೆ.
ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್ ಪಲ್ಟಿ, ಕೊರೊನಾ ಸೋಂಕಿತ ಸಾವು - Ambulance overturn
ಮಹಾರಾಷ್ಟ್ರ ಮೂಲದ 51 ವರ್ಷದ ಕೊರೊನಾ ಸೋಂಕಿತ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೃತನು ಮಹಾರಾಷ್ಟ್ರದ ಜತ್ತ ತಾಲೂಕಿನ ಸಿಂಧೂರ ಗ್ರಾಮದ ನಿವಾಸಿ. ಅಥಣಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ..
ಕೊರೊನಾ ಸೋಂಕಿತ ಸಾವು
ಮಹಾರಾಷ್ಟ್ರ ಮೂಲದ 51 ವರ್ಷದ ಕೊರೊನಾ ಸೋಂಕಿತ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೃತನು ಮಹಾರಾಷ್ಟ್ರದ ಜತ್ತ ತಾಲೂಕಿನ ಸಿಂಧೂರ ಗ್ರಾಮದ ನಿವಾಸಿ. ಅಥಣಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿಗೆ ಕರೆದೊಯ್ಯುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.