ಬೆಳಗಾವಿ: ತಡರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ನಗರದ ಕ್ಯಾಂಪ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಫಿಶ್ ಮಾರ್ಕೆಟ್ ಬಳಿಯ ಕ್ಯಾಂಪ್ ಪ್ರದೇಶ ನಿವಾಸಿ ಸುಧೀರ್ ಕಾಂಬಳೆ(57) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.
ಮನೆಗೆ ನುಗ್ಗಿ ಮಲಗಿದ್ದ ವ್ಯಕ್ತಿಯ ಬರ್ಬರ ಹತ್ಯೆ.. ಬೆಚ್ಚಿಬಿದ್ದ ಕುಟುಂಬ - ಈಟಿವಿ ಭಾರತ ಕನ್ನಡ
ತಡರಾತ್ರಿ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮನೆಗೆ ನುಗ್ಗಿ ಮಲಗಿದ್ದ ವ್ಯಕ್ತಿಯ ಬರ್ಬರ ಹತ್ಯೆ.. ಬೆಚ್ಚಿಬಿದ್ದ ಕುಟುಂಬ
ಕೊಲೆಯಾದ ವ್ಯಕ್ತಿ ದುಬೈನಲ್ಲಿ ವಾಸವಾಗಿದ್ದರು. ಕಳೆದರೆಡು ವರ್ಷಗಳ ಹಿಂದೆ ಕೋವಿಡ್ ನಿಂದಾಗಿ ಬೆಳಗಾವಿಗೆ ಬಂದು ನೆಲೆಸಿದ್ದರು. ನಿನ್ನೆ ತಡರಾತ್ರಿ ಸುಧೀರ್ ಮನೆಗೆ ನುಗ್ಗಿದ ದುಷ್ಕರ್ಮಿಗಳು, ಸುಧೀರ್ ಹೊಟ್ಟೆ, ಕತ್ತು, ಕೈ, ಮುಖಕ್ಕೆ ಇರಿದು ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಸುಧೀರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕ್ಯಾಂಪ್ ಪೊಲೀಸರು, ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ :ಬೆಂಗಳೂರು: ಮಾದಕ ದಂಧೆಯಿಂದ ಕೋಟಿ ಕೋಟಿ ಗಳಿಸಿದವನ ಆಸ್ತಿ ಮುಟ್ಟುಗೋಲು