ಚಿಕ್ಕೋಡಿ:ಮಾನಸಿಕ ಅಸ್ವಸ್ಥನೊಬ್ಬ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಚಾಂದಶೀರವಾಡ ಗ್ರಾಮದಲ್ಲಿ ನಡೆದಿದೆ.
ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಾನಸಿಕ ಅಸ್ವಸ್ಥ..! - a mentally ill committed suicide
ನದಿಗೆ ಹಾರಿ ಮಾನಸಿಕ ಅಸ್ವಸ್ಥನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ನಿಪ್ಪಾಣಿ ತಾಲೂಕಿನ ಚಾಂದಶೀರವಾಡ ಗ್ರಾಮದಲ್ಲಿ ನಡೆದಿದೆ. ಸದಲಗಾ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಾನಸಿಕ ಅಸ್ವಸ್ಥ
ಗ್ರಾಮದ ಉತ್ತಮ ಕಾಂಬಳೆ (45) ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದ ಹಲವು ವರ್ಷಗಳಿಂದ ಮನೋ ರೋಗದಿಂದ ಬಳುತ್ತಿದ್ದರು. ಹಲವು ಬಾರಿ ಮಾನಸಿಕ ರೋಗಕ್ಕೆ ಚಿಕಿತ್ಸೆಯನ್ನು ನೀಡಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆ ಮಾನಸಿಕ ತೀವ್ರತೆಯಿಂದ ನದಿಗೆ ಹಾರಿ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ. ಈ ಕುರಿತು ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.