ಬೆಳಗಾವಿ:ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಇಂದಿರಾ ನಗರದಲ್ಲಿ ನಡೆದಿದೆ.
ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ - etv bharat kannada
ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಲಹೊಂಗಲದ ಪಟ್ಟಣದ ಇಂದಿರಾ ನಗರದಲ್ಲಿ ನಡೆದಿದೆ.
![ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ student committed suicide](https://etvbharatimages.akamaized.net/etvbharat/prod-images/768-512-17001021-thumbnail-3x2-bg.jpg)
ವಿದ್ಯಾರ್ಥಿ ಆತ್ಮಹತ್ಯೆ
ಬೈಲಹೊಂಗಲ ತಾಲೂಕಿನ ಕೊಡ್ಡಿವಾಡ ಗ್ರಾಮದ ಪರುಶರಾಮ ಕೋನೇರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ತನ್ನ ಸಹಪಾಠಿಗಳು ಕಾಲೇಜಿಗೆ ಹೋದ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎಷ್ಟು ಹೊತ್ತಾದರೂ ಬಾಗಿಲು ತೆರೆಯದ ಕಾರಣ ಅನುಮಾನಗೊಂಡ ಇತರ ವಿದ್ಯಾರ್ಥಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ವಿದ್ಯಾರ್ಥಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಯುತ್ತಿದೆ.
ಇದನ್ನೂ ಓದಿ:ಪ್ರಿಯತಮೆಯೊಂದಿಗೆ ತನಗೂ ಬೆಂಕಿ ಹಂಚಿಕೊಂಡಿದ್ದ ಯುವಕ ಸಾವು