ಕರ್ನಾಟಕ

karnataka

ETV Bharat / state

ಅಥಣಿಯಲ್ಲಿ ಕೊರೊನಾಗೆ ಟೆಕ್ಕಿ ಬಲಿ: ಬೆಳಗಾವಿ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಎರಡಕ್ಕೇರಿಕೆ

ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಎರಡನೇ ಬಲಿ ಪಡೆದಿದೆ. ಅಥಣಿ ತಾಲೂಕಲ್ಲಿ ಟೆಕ್ಕಿಯೊಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.

Athani techie death news
ಅಥಣಿ ಟೆಕ್ಕಿ ಸಾವು

By

Published : Jun 30, 2020, 6:34 PM IST

ಅಥಣಿ(ಬೆಳಗಾವಿ): ತಾಲೂಕಿನಲ್ಲಿ ಮಹಾಮಾರಿ ಕೊರೊನಾಗೆ 32 ವರ್ಷದ ಟೆಕ್ಕಿ ಬಲಿಯಾಗಿದ್ದಾರೆ. ತಾಲೂಕಿನ ಸಂಕೋನಟ್ಟಿ ಗ್ರಾಮದ ನಿವಾಸಿ ಕೊರೊನಾದಿಂದ ಸಾವನ್ನಪ್ಪಿರುವುದು ದೃಢಪಟ್ಟಿದೆ.

ಇದರಿಂದ ಬೆಳಗಾವಿ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಉಸಿರಾಟ ಸಮಸ್ಯೆ, ಜ್ವರದಿಂದ ಬಳಲುತ್ತಿದ್ದ ಈ ವ್ಯಕ್ತಿಯನ್ನು ಜೂನ್ 27ರಂದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಈ ವ್ಯಕ್ತಿ ನಿನ್ನೆ ತಡರಾತ್ರಿ ಮೃತಪಟ್ಟಿದ್ದಾರೆ. ಈ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ಇಂದು ದೃಢಪಟ್ಟಿದೆ.

ತಾಲೂಕಾಡಳಿತವೇ ಕೋವಿಡ್ ಮಾರ್ಗಸೂಚಿಯಂತೆ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಅಂತ್ಯಸಂಸ್ಕಾರ ನೆರವೇರಿಸಿದೆ. ಈ ವ್ಯಕ್ತಿಯೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 8 ಜನರನ್ನು ಮತ್ತು ದ್ವಿತೀಯ ಸಂಪರ್ಕ ಹೊಂದಿದ್ದ 12 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಮುತ್ತಪ್ಪ ಕೊಪ್ಪದ ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದಾರೆ.

ಇಂಗ್ಲೆಂಡ್ ನಲ್ಲಿ ನೆಲೆಸಿದ್ದ ಈ ವ್ಯಕ್ತಿ ಖಾಸಗಿ ಕಂಪನಿಯಲ್ಲಿ ಎಂಜಿನಿಯರ್​ ಆಗಿದ್ದರು. ಜನವರಿ 15ಕ್ಕೆ ಅಥಣಿಗೆ ಮರಳಿದ್ದ ಇವರು ಲಾಕ್ ಡೌನ್ ಹಿನ್ನೆಲೆಯಲ್ಲಿ ಇಂಗ್ಲೆಂಡಿಗೆ ಹಿಂದಿರುಗಿರಲಿಲ್ಲ. ಊರಲ್ಲೇ ಇದ್ದುಕೊಂಡು ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ABOUT THE AUTHOR

...view details