ಕರ್ನಾಟಕ

karnataka

ETV Bharat / state

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ : ಪೊಲೀಸ್​ ಕಾನ್ಸ್​ಟೇಬಲ್​ ಸ್ಥಳದಲ್ಲೇ ಸಾವು - Belgaum road accident

ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಪೊಲೀಸ್ ಕಾನ್ಸ್​ಟೇಬಲ್​ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

By

Published : Jun 25, 2020, 10:25 PM IST

ಬೆಳಗಾವಿ: ಕರ್ತವ್ಯ ಮುಗಿಸಿ ಮನೆಗೆ ಹೋಗುತ್ತಿದ್ದ ಕೆಎಸ್ಆರ್‌ಪಿ ಪೊಲೀಸ್ ಕಾನ್ಸ್​ಟೇಬಲ್​ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ

ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಈ ಘಟನೆ ನಡೆದಿದೆ. ಬೈಕ್ ನಲ್ಲಿ ತೆರಳುತ್ತಿದ್ದ ಪೊಲೀಸ್ ಕಾನ್ಸ್​ಟೇಬಲ್​ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದ್ದು, ಕಾನ್ಸ್​ಟೇಬಲ್ ಹಾಲ್ಲಪ್ಪ ಚಂಡಕಿ (48) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಕಾನ್ಸ್​ಟೇಬಲ್ ದತ್ತು ಪಾಟೀಲ್ ಗಂಭೀರ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಇಬ್ಬರು ಬೆಳಗಾವಿ ತಾಲೂಕಿನ ಬೂತರಾಮನಟ್ಟಿ ಗ್ರಾಮದ ಮನೆಗೆ ತೆರಳುತ್ತಿದ್ದರು. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ABOUT THE AUTHOR

...view details