ಬೆಳಗಾವಿ: ರಾಜ್ಯದ ಪ್ರತಿಷ್ಠಿತ ಸಂಸ್ಥೆಗಳ ಎಂಬಿಬಿಎಸ್ ಕಾಲೇಜುಗಳಲ್ಲಿ ಹಣಕ್ಕಾಗಿ ವೈದ್ಯಕೀಯ ಸೀಟುಗಳನ್ನು ಮಾರಾಟ ಮಾಡುತ್ತಿರುವುದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ನಗರದ ಆರ್ಪಿಡಿ ಸರ್ಕಲ್‍ನಲ್ಲಿ ಎಬಿವಿಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮೆಡಿಕಲ್ ಸೀಟು ಮಾರಾಟ ದಂಧೆ ಆರೋಪ: ಬೆಳಗಾವಿಯಲ್ಲಿ ಎಬಿವಿಪಿ ಪ್ರತಿಭಟನೆ
ಹಣಕ್ಕಾಗಿ ವೈದ್ಯಕೀಯ ಸೀಟು ಮಾರಾಟ ಮಾಡುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಬೆಳಗಾವಿಯಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬೆಳಗಾವಿಯಲ್ಲಿ ಎಬಿವಿಪಿ ಪ್ರತಿಭಟನೆ
ಶಿಕ್ಷಣ ಕ್ಷೇತ್ರದಲ್ಲಿ ಇಡೀ ದೇಶದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಆದರೆ ಕೆಲ ಸಂಸ್ಥೆಗಳು ಹಣಕ್ಕಾಗಿ ಬಡ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ನೀಡುತ್ತಿಲ್ಲ. ಸೀಟು ಹಂಚಿಕೆಯಲ್ಲಿ ದೊಡ್ಡ ದಂಧೆಯೇ ನಡೆಯುತ್ತಿದೆ. ಹೀಗಾಗಿಯೇ ಈಚೆಗೆ ಇಡಿ ಅಧಿಕಾರಿಗಳು ಅಂತಹ ಕಾಲೇಜುಗಳ ಮೇಲೆ ದಾಳಿ ನಡೆಸಿದ್ದಾರೆ. ಪಾರದರ್ಶಕವಾಗಿ ಅರ್ಹ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ಸಿಗುವಂತೆ ಮಾಡಬೇಕಿದೆ ಎಂದು ಒತ್ತಾಯಿಸಿದರು.