ಚಿಕ್ಕೋಡಿ: ಪಟ್ಟಣದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ ನೌಕರನೋರ್ವ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾನೆ.
ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ ನೌಕರ ಎಸಿಬಿ ಬಲೆಗೆ - controller-of-co-operative-societies
ಬೆಳಗಾವಿ ಉತ್ತರ ವಲಯ ಎಸಿಬಿ ಪೊಲೀಸ್ ಅಧೀಕ್ಷಕ ಬಿ.ಎಸ್ ನೇಮಗೌಡ ಅವರ ಮಾರ್ಗದರ್ಶನದಲ್ಲಿ ನಡೆದ ದಾಳಿಯಲ್ಲಿ 3,000 ರೂ. ಲಂಚ ಸ್ವೀಕರಿಸುತ್ತಿದ್ದ ಸಹಕಾರ ಸಂಘದ ನೌಕರ ಚೇತನ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಈತನನ್ನು ವಶಕ್ಕೆ ಪಡೆದ ಎಸಿಬಿ ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸಿದ್ದಾರೆ.
ಚೇತನ್ ಹಂಜಿ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಬ್ಬಂದಿ. ಈತ ಅಥಣಿಯ ಬಾಳಪ್ಪ ಸಿದ್ದಪ್ಪ ಬನ್ನಟ್ಟಿ ಎಂಬುವವರಿಗೆ ಶಿವನೂರ ಹಾಲು ಉತ್ಪಾದಕರ ಸಹಕಾರಿ ಸಂಘ ನಿಯಮಿತ. ನೇದ್ದರ ಹೊಸ ಬೈಲಾ ಅನುಮೋದನೆ ಮಾಡಿ ಸ್ವೀಕೃತಿ ನೀಡಲು 3,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದನು. ಈ ಹಿನ್ನೆಲೆಯಲ್ಲಿ ಬಾಳಪ್ಪ ಎಸಿಬಿಗೆ ದೂರು ನೀಡಿದ್ದರು.
ಬೆಳಗಾವಿ ಉತ್ತರ ವಲಯ ಎಸಿಬಿ ಪೊಲೀಸ್ ಅಧೀಕ್ಷಕ ಬಿ.ಎಸ್ ನೇಮಗೌಡ ಅವರ ಮಾರ್ಗದರ್ಶನದಲ್ಲಿ ನಡೆದ ದಾಳಿಯಲ್ಲಿ 3,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ, ಸಹಕಾರ ಸಂಘದ ನೌಕರ ಚೇತನ್ ಎಸಿಬಿ ಬಲೆಗೆ ಬಿದ್ದಿದ್ದಾನೆ. ಈತನನ್ನು ವಶಕ್ಕೆ ಪಡೆದ ಎಸಿಬಿ ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸಿದ್ದಾರೆ.