ಕರ್ನಾಟಕ

karnataka

ETV Bharat / state

ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ದಾಳಿ : ಅಥಣಿಯಲ್ಲಿ ಇಬ್ಬರು ಅಧಿಕಾರಿಗಳು ವಶಕ್ಕೆ

ಅಥಣಿ ನಗರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಲಂಚ ಪಡೆಯುತ್ತಿದ್ದ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

ಎಸಿಬಿ ದಾಳಿ
ACB raids

By

Published : Sep 22, 2021, 7:02 PM IST

ಅಥಣಿ:ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಕಚೇರಿ ಮೇಲೆ ಇಂದು ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಲಂಚ ಸ್ವಿಕರಿಸುತ್ತಿದ್ದ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

ಅಥಣಿಯಲ್ಲಿ ದಾಳಿ ನಡೆಸಿದ ಎಸಿಬಿ

ಎಇಇ ರಾಜೇಂದ್ರ ಪರ್ನಾಕರ್​ ಹಾಗೂ ದೀಪಕ್​​​ ಕುಲಕರ್ಣಿ ಎಂಬ ಅಧಿಕಾರಿಗಳು ಗುತ್ತಿಗೆದಾರರಿಂದ 68 ಸಾವಿರ ರೂಪಾಯಿ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಕೆಲ ದಿನಗಳ ಹಿಂದೆ ಈ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಆರೋಪಗಳು ಕೇಳಿ ಬಂದಿದ್ದವು. ಈ ಸಂಬಂಧ ಖಚಿತ ಮಾಹಿತಿ ಪಡೆದು ಎಸಿಬಿ ದಾಳಿ ನಡೆಸಿದೆ.

ಎಸಿಬಿ ಡಿಸಿಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಕಚೇರಿಯಲ್ಲಿ ಕಾಗದ ಪತ್ರಗಳನ್ನು ಅಧಿಕಾರಿಗಳು ಪರಿಶೀಲಿಸಿ ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಅತ್ಯಾಚಾರ ಆರೋಪಿ ಅರೆಸ್ಟ್​.. ವಿಚಾರ ವೇಳೆ ಕ್ಯಾಬ್​ ಡ್ರೈವರ್​ ಹೇಳಿದ್ದೇನು?

ABOUT THE AUTHOR

...view details