ಚಿಕ್ಕೋಡಿ (ಬೆಳಗಾವಿ): ಬೈಕ್ ಮತ್ತು ಟಾಟಾ ಏಸ್ ವಾಹನ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಅಂಕಲಿ ರಸ್ತೆಯ ಕೆರೂರು ಕ್ರಾಸ್ ಬಳಿ ಸಂಭವಿಸಿದೆ
ಬೈಕ್-ಟಾಟಾ ಏಸ್ ನಡುವೆ ಡಿಕ್ಕಿ: ಬೈಕ್ ಸವಾರ ಗಂಭೀರ
ಬೈಕ್ ಮತ್ತು ಟಾಟಾ ಏಸ್ ವಾಹನ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕೋಡಿಯಲ್ಲಿ ಸಂಭವಿಸಿದೆ.
ಬೈಕ್-ಟಾಟಾ ಎಸ್ ನಡುವೆ ಡಿಕ್ಕಿ
ಚಿಕ್ಕೋಡಿ ತಾಲೂಕಿನ ಕಾಡಾಪುರ ಗ್ರಾಮದ ಸಿದ್ದು ದಶರಥ ಉಸಕೆ (30) ಎಂಬಾತ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ. ಈತ ಕಾಡಾಪೂರದಿಂದ ಅಂಕಲಿ ಕಡೆಗೆ ಬರುತ್ತಿದ್ದ ವೇಳೆ ಕೆರೂರು ಕ್ರಾಸ್ ಬಳಿ ಅವಘಡ ಸಂಭವಿಸಿದೆ.
ಗಾಯಾಳುವಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.