ಕರ್ನಾಟಕ

karnataka

ETV Bharat / state

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಓರ್ವ ಸಾವು, ಇನ್ನೋರ್ವನ ಸ್ಥಿತಿ ಗಂಭೀರ - Accident in Chikkodi

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಹೊರಭಾಗದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ಲಾರಿ-ಕಾರು ಮುಖಾಮುಖಿ ಡಿಕ್ಕಿ
ಲಾರಿ-ಕಾರು ಮುಖಾಮುಖಿ ಡಿಕ್ಕಿ

By

Published : Jul 18, 2020, 8:04 PM IST

ಚಿಕ್ಕೋಡಿ: ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಹೊರಭಾಗದಲ್ಲಿ ನಡೆದಿದೆ.

ಲಾರಿ-ಕಾರು ಮುಖಾಮುಖಿ ಡಿಕ್ಕಿ

ಪರಮಾನಂದ ಸಿದ್ದಪ್ಪ ಧರಿಗೌಡ (24) ಎಂಬ ಕಾರು ಚಾಲಕ ಸಾವನ್ನಪ್ಪಿದ್ದು, ಈತ ಅಥಣಿ ತಾಲ್ಲೂಕಿನ ಸಂಕೊನಟ್ಟಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಹಾರೂಗೇರಿ ಕಡೆಯಿಂದ ಅಥಣಿ ಕಡೆ ಹೋಗುವಾಗ ಲಾರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಮೃತ ಪರಮಾನಂದ ಸಿದ್ದಪ್ಪ ಧರಿಗೌಡ

ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details