ಬೆಳಗಾವಿ: ಲಾರಿಗೆ ಹಿಂಬದಿಯಿಂದ ಕಾರು ಗುದ್ದಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಹಿರೇಬಾಗೇವಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಅಪಘಾತ ಸಂಭವಿಸಿದೆ.
ಬೆಳಗಾವಿ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ - ಬೆಳಗಾವಿಯಲ್ಲಿ ಅಪಘಾತ
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಬಳಿ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಳಗಾವಿ ಬಳಿ ಭೀಕರ ಅಪಘಾತ
ಯಲ್ಲಾಪುರದ ನಿವಾಸಿ ವಾಸೀಂ ಖಾನ್ (40), ಸಯ್ಯದ್ ಇಸ್ಮಾಯಿಲ್ (65), ಸುಶೀಲಾ ಫರ್ನಾಂಡಿಸ್ (60) ಮೃತಪಟ್ಟವರು. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಯಲ್ಲಾಪುರದಿಂದ ಬೆಳಗಾವಿಗೆ ಹೋಗುವ ವೇಳೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಡಿಸಿಪಿ ಡಾ.ವಿಕ್ರಮ್ ಆಮಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಇದನ್ನೂ ಓದಿ: ರಾಜ್ಯ ಪೊಲೀಸ್ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೆ ಶೇ.1ರಷ್ಟು ಮೀಸಲಾತಿ : ಮಂಗಳಮುಖಿ ಸಮುದಾಯ ಸಂತಸ)