ಚಿಕ್ಕೋಡಿ:ಕರ್ನಾಟಕ ಗಡಿ ಭಾಗದಲ್ಲಿರುವ ಗಡಹಿಂಗ್ಲಜ್ ಚಂದಗಡ ರಾಜ್ಯ ಹೆದ್ದಾರಿಯಲ್ಲಿ ಟಾಟಾ ಸುಮೋ ಮತ್ತು ಮಹಾರಾಷ್ಟ್ರ ಸಾರಿಗೆ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಗ್ರಾಮದ ಏಳು ಜನರು ಸಾವನ್ನಪ್ಪಿದ್ದಾರೆ.
ರಾಜ್ಯ ಗಡಿ ಭಾಗದಲ್ಲಿ ಭೀಕರ ರಸ್ತೆ ಅಪಘಾತ... ಒಂದೇ ಗ್ರಾಮದ 7 ಜನರ ದುರ್ಮರಣ - etv bharath
ಟಾಟಾ ಸುಮೋ ಮತ್ತು ಮಹಾರಾಷ್ಟ್ರ ಸಾರಿಗೆ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು,ಒಂದೇ ಗ್ರಾಮದ ಏಳು ಜನರು ಸಾವನ್ನಪ್ಪಿದ್ದಾರೆ. ಎಂಟು ಜನರಿಗೆ ಗಾಯವಾಗಿದೆ.
ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರ ಜಿಲ್ಲೆಯ ಗಡಹಿಂಗ್ಲಜ ಬಳಿ ಅಪಘಾತ ನಡೆದಿದೆ. ಶಿವಸೇನಾ- ಬಿಜೆಪಿ ಪ್ರಚಾರ ಸಭೆ ಮುಗಿಸಿಕೊಂಡು ಮನೆಗೆ ಮರಳುವಾಗ ಈ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ಕೊಲ್ಲಾಪುರ ಜಿಲ್ಲೆಯ ನೂಲ ಗ್ರಾಮದ ನಿವಾಸಿಗಳು ಎನ್ನಲಾಗಿದೆ.
ಅಪಘಾತದಲ್ಲಿ ಒಂದೇ ಗ್ರಾಮದ ಏಳು ಜನರು ಸಾವನ್ನಪ್ಪಿದ್ದು, ಎಂಟು ಜನರಿಗೆ ಗಾಯವಾಗಿದೆ. ಗಾಯಾಳುಗಳನ್ನು ಗಡಹಿಂಗ್ಲಜ ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲ್ಲಾಪುರ ಲೋಕಸಭಾ ಕ್ಷೇತ್ರದ ಶಿವಸೇನಾ-ಬಿಜೆಪಿಯ ಮೈತ್ರಿ ಪಕ್ಷದ ಅಭ್ಯರ್ಥಿ ಸಂಜಯ ಮಾಂಡಲಿಕ ಅವರ ಪರ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಈ ಕುರಿತು ಗಡಹಿಂಗ್ಲಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.