ಕರ್ನಾಟಕ

karnataka

ETV Bharat / state

ಬೈಕ್ ಅಪಘಾತ: ಗಾಯಾಳುವಿನ ಪ್ರಾಣ ರಕ್ಷಣೆಗೆ ದೌಡಾಯಿಸಿದ ಚಿಕ್ಕೋಡಿ ಉಪ ವಿಭಾಗಾಧಿಕಾರಿ

ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸವಾರರನ್ನು ಚಿಕ್ಕೋಡಿಯ ಉಪ ವಿಭಾಗಾಧಿಕಾರಿ ತಮ್ಮ ಕಾರಿನಲ್ಲಿ ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ದಾಖಲಿಸಿ ಜೀವ ಉಳಿಸಿದ್ದಾರೆ.

Accident injured Person was admitted  Person was admitted to hospital by AC in Belagavi  Accident injured Person  ಚಿಕ್ಕೋಡಿ ಉಪ ವಿಭಾಗಾಧಿಕಾರಿ  ಪ್ರಾಣರಕ್ಷಣೆಗೆ ದೌಡಾಯಿಸಿದ ಚಿಕ್ಕೋಡಿ ಉಪ ವಿಭಾಗಾಧಿಕಾರಿ  ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯ  ಯಕ್ಸಂಬಾ ರಾಯಬಾಗ ರಸ್ತೆ ಮಧ್ಯೆ ಬೈಕ್ ಅಪಘಾತ  ಅಪಘಾತದಲ್ಲಿ ಬೈಕ್​ ಸವಾರ ತೀವ್ರವಾಗಿ ಗಾಯ  ವಾಹನದಲ್ಲೇ ಆಸ್ಪತ್ರೆಗೆ ಸೇರಿಸಿ ಸಮಯಪ್ರಜ್ಞೆಯನ್ನು ಮೆರೆದ  ಇತ್ತಿಚೇಗೆ ಸಂಭವಿಸಿದ ಅಪಘಾತದಲ್ಲಿ ಆರು ಜನ ಸಾವು  ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ
ಗಾಯಾಳುವಿನ ಪ್ರಾಣರಕ್ಷಣೆಗೆ ದೌಡಾಯಿಸಿದ ಚಿಕ್ಕೋಡಿ ಉಪ ವಿಭಾಗಾಧಿಕಾರಿ

By

Published : Jan 6, 2023, 2:39 PM IST

ಚಿಕ್ಕೋಡಿ, ಬೆಳಗಾವಿ:ಯಕ್ಸಂಬಾ - ರಾಯಬಾಗ ರಸ್ತೆ ಮಧ್ಯೆ ಬೈಕ್ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಬೈಕ್​ ಸವಾರ ತೀವ್ರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿ ತಲುಪಿದ್ದನು. ಇದೇ ಮಾರ್ಗವಾಗಿ ಹೋಗುತ್ತಿದ್ದ ಉಪ ವಿಭಾಗಾಧಿಕರಿ ಗಾಯಾಳುವನ್ನು ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸೇರಿಸಿ ಸಮಯ ಪ್ರಜ್ಞೆಯನ್ನು ಮೆರೆದಿದ್ದಾರೆ. ಮಹಾರಾಷ್ಟ್ರ ರಾಜ್ಯದ ಉಸ್ಮಾನಾಬಾದ್ ಮೂಲದ ದತ್ತಾ ಎಂಬುವರು ಬೈಕ್​ನಲ್ಲಿ ತೆರಳುವಾಗ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು.

ಚಿಕ್ಕೋಡಿ ಉಪ ವಿಭಾಗಾಧಿಕಾರಿ ಮಾಧವ ಗಿತ್ತೆ

ತೀವ್ರ ರಕ್ತಸ್ರಾವದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಅವರನ್ನು ಯಾರೂ ಅವರ ರಕ್ಷಣೆಗೆ ಮುಂದಾಗಿರಲಿಲ್ಲ. ಅದೇ ಮಾರ್ಗದಲ್ಲಿ ರಾಯಬಾಗಕ್ಕೆ ತೆರಳುತ್ತಿದ್ದ ಚಿಕ್ಕೋಡಿ ಉಪ ವಿಭಾಗಾಧಿಕಾರಿ ಮಾಧವ ಗಿತ್ತೆ ಅವರು ತಮ್ಮ ವಾಹನವನ್ನು ನಿಲ್ಲಿಸಿ ಗಾಯಾಳುವಿನ ನೆರವಿಗೆ ಮುಂದಾದರು. ತಮ್ಮ ಸರಕಾರಿ ವಾಹನ ಚಾಲಕ ಹಾಗೂ ಇನ್ನೊಬ್ಬರ ನೆರವಿನಿಂದ ಗಾಯಾಳುವನ್ನು ಚಿಕ್ಕೋಡಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಸಕಾಲದಲ್ಲಿ ಚಿಕಿತ್ಸೆ ಒದಗಿಸಿದರು.

ಈ ಕುರಿತು 2020ನೇ ಸಾಲಿನ ತಂಡದ ಐಎಎಸ್ ಅಧಿಕಾರಿ ಚಿಕ್ಕೋಡಿ ಉಪ ವಿಭಾಗಾಧಿಕಾರಿ ಮಾಧವ ಅವರು ಮಾತನಾಡಿ, ಇಂತಹ ಘಟನೆಗಳು ನಡೆದಾಗ ಸಾರ್ವಜನಿಕರು ತಕ್ಷಣವೇ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಸಕಾಲದಲ್ಲಿ ಚಿಕಿತ್ಸೆ ಒದಗಿಸಿದಲ್ಲಿ ಪ್ರಾಣ ರಕ್ಷಿಸಬಹುದು ಎಂದು ಹೇಳಿದರು. ಗಾಯಾಳು ದತ್ತಾ ಅವರು ಚೇತರಿಸಿಕೊಂಡಿದ್ದು, ಮೆದುಳಿನ ಸಿಟಿ ಸ್ಕ್ಯಾನ್​ಗಾಗಿ ಬೆಳಗಾವಿಯ ಬಿಮ್ಸ್​ಗೆ ಕಳುಹಿಸಲಾಗಿದೆ ಎಂದು ವಿವರಿಸಿದರು.

ಓದಿ:ಅಂತ್ಯಕ್ರಿಯೆಗೆ ಸಾಗುವಾಗಲೇ ಕಣ್ತೆರೆದ ವೃದ್ಧೆ; ಬದುಕಿ ಮತ್ತೆ ಪ್ರಾಣ ಬಿಟ್ಟು ಅಚ್ಚರಿ!

ಇತ್ತಿಚೇಗೆ ಸಂಭವಿಸಿದ ಅಪಘಾತದಲ್ಲಿ ಆರು ಜನ ಸಾವು:ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನ ಮರಕ್ಕೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿದ್ದರು. ಈ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ ಸಂಭವಿಸಿತ್ತು. ಮೃತರನ್ನು ಹಣಮವ್ವ ಮೇಗಾಡಿ (25), ದೀಪಾ (31), ಸವಿತಾ (12), ಸುಪ್ರೀತಾ (11) ಮಾರುತಿ (43), ಇಂದ್ರವ್ವಾ (28) ಎಂದು ಗುರುತಿಸಲಾಗಿದೆ.

ಗ್ರಾಮದಿಂದ ಹೊರಟ ವಾಹನವು ರಾಮದುರ್ಗ ಮಾರ್ಗವಾಗಿ, ಚುಂಚನೂರು ಗ್ರಾಮದ ಸರಹದ್ದಿಗೆ ಬಂದಿತ್ತು. ವೇಗವಾಗಿ ಚಲಿಸುತ್ತಿದ್ದ ವಾಹನ ಚುಂಚನೂರು ವಿಠಲಪ್ಪನ ದೇವಸ್ಥಾನದ ಮುದಿನ ಬೃಹತ್‌ ಆಲದ ಮರಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದಿತ್ತು. ಅಪಘಾತದ ರಭಸಕ್ಕೆ ವಾಹನ ಸಂಪೂರ್ಣ ನಜ್ಜುಗುಜ್ಜಾಗಿತ್ತು. ಇದೇ ಮಾರ್ಗದಲ್ಲಿ ದೇವಸ್ಥಾನಕ್ಕೆ ಹೊರಟಿದ್ದ ಇತರ ವಾಹನಗಳ ಸವಾರರು, ಗ್ರಾಮಸ್ಥರು ಸಹಾಯಕ್ಕೆ ಧಾವಿಸಿ, ರಕ್ಷಣಾ ಕಾರ್ಯ ಮಾಡಿದರು. ಸ್ಥಳಕ್ಕೆ ಬಂದ ಕಟಕೋಳ ಪೊಲೀಸರೂ ಆಂಬ್ಯುಲೆನ್ಸ್ ಮೂಲಕ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಿದ್ದರು. ಸ್ಥಳಕ್ಕೆ ಬೆಳಗಾವಿ ಎಸ್ಪಿ ಡಾ.ಸಂಜೀವ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ: ಅಪಘಾತದಲ್ಲಿ ಮೃತಪಟ್ಟಿರುವ ಆರು ಜನರ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ನೀಡಲು ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದರು. ಗಾಯಗೊಂಡಿರುವ 16 ಜನರಿಗೆ ಅಗತ್ಯ ಚಿಕಿತ್ಸೆ ನೀಡಲಾಗುವುದು. ಈ ಕುರಿತು ಈಗಾಗಲೇ ಜಿಲ್ಲಾಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗುರುವಾರ ತಿಳಿಸಿದ್ದರು.

ಕುಟುಂಬಸ್ಥರಿಗೆ ಸಾಂತ್ವನ: ಅಪಘಾತದಲ್ಲಿ​ ಮೃತಪಟ್ಟಿರುವವರ ಆತ್ಮಕ್ಕೆ ಭಗವಂತ ಚಿರಶಾಂತಿ ದಯಪಾಲಿಸಲಿ. ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ. ಮೃತರ ಕುಟುಂಬದ ದುಃಖದಲ್ಲಿ ತಾವೂ ಭಾಗಿಯಾಗಿದ್ದೇವೆ ಎಂದು ಕುಟುಂಬದ ಸದಸ್ಯರಿಗೆ ಸಚಿವ ಗೋವಿಂದ ಕಾರಜೋಳ ಸಾಂತ್ವನ ಹೇಳಿದ್ದರು.

ಓದಿ:35 ಬಾರಿ ಇರಿದು ವಿವಾಹಿತೆಯ ಭೀಕರ ಕೊಲೆ: ಪ್ರಿಯಕರ ಸೇರಿ ಇಬ್ಬರ ಬಂಧನ

ABOUT THE AUTHOR

...view details