ಬೆಳಗಾವಿ :ಆರೋಗ್ಯ ಇಲಾಖೆ ಮೇಲ್ವಿಚಾರಕ ಬಸವರಾಜ ಡೊಳ್ಳಿನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪೊಲೀಸ್ ಪೇದೆ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಲೋಕೇಶ್ ಕುಮಾರ್ ತಿಳಿಸಿದರು.
ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಮಾರಣಾಂತಿಕ ಹಲ್ಲೆ: ಪೇದೆ ವಿರುದ್ಧ ಶಿಸ್ತು ಕ್ರಮ - Action against Constable who Assaulted Health Officer in Belgavi
ಕರ್ತವ್ಯಕ್ಕೆ ಹೊರಟಿದ್ದ ಆರೋಗ್ಯ ಇಲಾಖೆ ಮೇಲ್ವಿಚಾರಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪೇದೆ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಲೋಕೇಶ್ ಕುಮಾರ್ ತಿಳಿಸಿದ್ದಾರೆ.
ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಮಾರಣಾಂತಿಕ ಹಲ್ಲೆ
ಮಾಳಮಾರುತಿ ಠಾಣೆಯ ಪೇದೆ ಮಂಜುನಾಥ ಮಲ್ಲಸರ್ಜ ತಪ್ಪು ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಮಾರ್ಚ್ 28ರಂದು ಕರ್ತವ್ಯಕ್ಕೆ ಹೊರಟಿದ್ದ ಆರೋಗ್ಯ ಇಲಾಖೆ ಮೇಲ್ವಿಚಾರಕ ಬಸವರಾಜ ಡೊಳ್ಳಿನ ಮೇಲೆ ಪೇದೆ ಮಂಜುನಾಥ ಲಾಠಿ ಚಾರ್ಜ್ ಮಾಡಿದ್ದ. ಗಂಭೀರವಾಗಿ ಗಾಯಗೊಂಡಿರುವ ಬಸವರಾಜ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೇದೆ ವಿರುದ್ಧ ಇಲಾಖಾ ಶಿಸ್ತು ಕ್ರಮ ಜರುಗಿಸಲು ಆದೇಶ ನೀಡಲಾಗಿದೆ ಎಂದು ಪೊಲೀಸ್ ಆಯುಕ್ತರು ಹೇಳಿದರು.