ಕರ್ನಾಟಕ

karnataka

ETV Bharat / state

ಅಕ್ರಮ ಕ್ವಾರಿ, ಸ್ಫೋಟಕಗಳ ಅಕ್ರಮ ಸಾಗಣೆ ನಿಯಂತ್ರಣಕ್ಕೆ ಕ್ರಮ: ಎಸ್ಪಿ ಲಕ್ಷ್ಮಣ ನಿಂಬರಗಿ - Belagavi latest news

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಾರ್ಯಾಲಯದ ಸಭಾಭವನದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕಾನೂನು ಬಾಹಿರವಾಗಿ ಕ್ವಾರಿಗಳು ಕೂಡ ಆರಂಭಿಸಲಾಗಿದ್ದು, ಅದರ ಕುರಿತಂತೆ ಸಮೀಕ್ಷೆ ನಡೆಸಿ ಒಂದು ವಾರದಲ್ಲಿ ಮಾಹಿತಿ ನೀಡಬೇಕು. ಇನ್ನು ಪ್ರತಿ ತಿಂಗಳು ತಾಲೂಕ ಮಟ್ಟದಲ್ಲಿ ಸಭೆಗಳನ್ನು ನಡೆಸಿ ನಿಗದಿತ ಅವಧಿಯಲ್ಲಿ ವರದಿಯನ್ನು ನೀಡಲು ಸೂಚಿಸಿದರು.

Meeting
ಸಭೆ

By

Published : Feb 25, 2021, 12:21 PM IST

ಬೆಳಗಾವಿ:ಶಿವಮೊಗ್ಗ ಜಿಲ್ಲೆಯ ಹಣಸೋಡು ಹಾಗೂ ಚಿಕ್ಕಬಳ್ಳಾಪುರ ತಾಲೂಕಿನ ಹಿರೇನಾಗವಲ್ಲಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆದ ಸ್ಫೋಟ ದುರಂತದ ಘಟನೆಗಳು ನಮ್ಮ ಜಿಲ್ಲೆಯಲ್ಲಿ ಆಗದಂತೆ ಎಚ್ಚರಿಕೆ ವಹಿಸಬೇಕು. ಅಕ್ರಮ ಕ್ವಾರಿ ಹಾಗೂ ಸ್ಫೋಟಕಗಳ ಅಕ್ರಮ ಸಂಗ್ರಹ ಮತ್ತು ಸಾಗಾಣಿಕೆ ಮೇಲೆ ನಿಗಾ ವಹಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಾರ್ಯಾಲಯದ ಸಭಾಭವನದಲ್ಲಿ ತುರ್ತು ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಮೂಲ ಉದ್ದೇಶವು ಅಕ್ರಮ ಕ್ವಾರಿಗಳು ಹಾಗೂ ಅಕ್ರಮ ಸ್ಫೋಟಕಗಳನ್ನು ಪತ್ತೆ ಹಚ್ಚುವುದು. ಯಾವುದೇ ಕಾನೂನುಬದ್ಧ ಕ್ವಾರಿಗಳನ್ನು ಮುಚ್ಚಿಸುವುದಲ್ಲ. ಮಾನವ ಪ್ರಾಣಕ್ಕೆ ಹಾನಿಯಾಗದೇ ಸ್ಫೋಟಕಗಳನ್ನು ಬಳಸುವುದು ಹೇಗೆ ಎಂಬುದರ ಅರಿವು ಮೂಡಿಸಬೇಕಿದ್ದು, ರಾಜ್ಯದಲ್ಲಿ ಅಕ್ರಮವಾಗಿ ಸ್ಫೋಟಕ ಸಾಗಾಟ ಆಗುತ್ತಿರುವುದು ಗಮನಕ್ಕೆ ಬಂದಿದೆ. ಅದು ಇನ್ಮುಂದೆ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾನೂನು ಬಾಹಿರವಾಗಿ ಕ್ವಾರಿಗಳನ್ನು ಕೂಡ ಆರಂಭಿಸಲಾಗಿದ್ದು, ಅದರ ಕುರಿತಂತೆ ಸಮೀಕ್ಷೆ ನಡೆಸಿ ಒಂದು ವಾರದಲ್ಲಿ ಮಾಹಿತಿ ನೀಡಬೇಕು. ಪ್ರತಿ ತಿಂಗಳು ತಾಲೂಕು ಮಟ್ಟದಲ್ಲಿ ಸಭೆಗಳನ್ನು ನಡೆಸಿ ನಿಗದಿತ ಅವಧಿಯಲ್ಲಿ ವರದಿಯನ್ನು ನೀಡಲು ಸೂಚಿಸಿದರು. ಎಲ್ಲ ಇಲಾಖೆಯವರು ಪರಸ್ಪರ ಸಹಕಾರ ನೀಡಿ ಮಾಹಿತಿಯನ್ನು ಒದಗಿಸಲು ಹಾಗೂ ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಅರಣ್ಯ ಪ್ರದೇಶದಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಕ್ವಾರಿಗಳು ನಿರ್ಮಾಣವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ತಿಳಿಸಿದರು.

ಮರಳು ಸಾಗಾಣಿಕೆ ಮಾಡುವಂತಹ ಪ್ರತಿ ವಾಹನಕ್ಕೆ ಜಿಪಿಎಸ್ ಅಳವಡಿಸಬೇಕು. ಜಿಪಿಎಸ್ ಹೊಂದಿರದ ವಾಹನಗಳಲ್ಲಿ ಮರಳು ಸಾಗಾಣಿಕೆ ಮಾಡಲು ಅನುಮತಿಯನ್ನು ನೀಡಬಾರದು. ಪಾಸ್ ಗಳಿಲ್ಲದ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಬೇಕು. ಮಾರ್ಚ್ ಅಂತ್ಯದೊಳಗೆ ಗಣಿಗಾರಿಕೆ ಹಾಗೂ ಸ್ಫೋಟಕ ಸಾಗಾಣಿ-ಸಂಗ್ರಹಣೆ ಕುರಿತು ಸಮಗ್ರ ಮಾಹಿತಿಯನ್ನು ಸಲ್ಲಿಸಬೇಕು ಎಂದು ಲಕ್ಷ್ಮಣ ನಿಂಬರಗಿ ತಿಳಿಸಿದರು.

ಪ್ರಮುಖವಾಗಿ ಗೋಕಾಕ್ ಹಾಗೂ ಸತಿಗೇರಿಯ ಗ್ರಾಮಗಳಲ್ಲಿ ಕಾನೂನುಬಾಹಿರ ಕ್ವಾರಿಗಳು ತಲೆಯೆತ್ತಿದ್ದು ಎರಡು ತಾಲೂಕುಗಳಿಗೆ ಅತಿ ಶೀಘ್ರದಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಕ್ವಾರಿಗಳನ್ನು ಪರೀಕ್ಷಿಸಬೇಕು. ಪೊಲೀಸ್ ಅಧಿಕಾರಿಗಳಿಗಾಗಿ ಮುಂದಿನ ವಾರದಲ್ಲಿ ಒಂದು ವಿಶೇಷ ಸ್ಫೋಟಕ ಕಾರ್ಯಾಗಾರವನ್ನು ಮಾಡುವುದಾಗಿ ಪೊಲೀಸ್ ವರಿಷ್ಠಾಧಿಕಾರಿಗಳು ಹೇಳಿದರು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಬಿಂದನ್,ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ್ ರೆಡ್ಡಿ, ಗಣಿ ಮತ್ತು ಭೂ ಇಲಾಖೆ ಅಧಿಕಾರಿ ಗಳು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಅಗ್ನಿಶಾಮಕ ಮತ್ತು ತುರ್ತು ಸೇವಾ ಅಧೀಕ್ಷಕರು, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಇದ್ದರು.

ABOUT THE AUTHOR

...view details