ಧಾರವಾಡ: ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಪಾಡುವುದು ಮತ್ತು ಸ್ಯಾನಿಟೈಸರ್, ಹ್ಯಾಂಡ್ ವಾಷ್ ನಿಯಮಗಳನ್ನು ಪ್ರತಿಯೊಬ್ಬರು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸೂಚಿಸಿದ್ದಾರೆ.
ಕೊರೊನಾ ನಿಯಮ ಪಾಲಿಸದಿದ್ದರೆ ಕಠಿಣ ಕ್ರಮ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ್
ನಿಮ್ಮಲ್ಲಿ ಕೊರೊನಾ ನಿಯಮಗಳು ಪಾಲನೆ ಆಗುತ್ತಿಲ್ಲ. ಪಾಲಿಕೆ ಹಾಗೂ ಪೊಲೀಸ್ ಇಲಾಖೆಯಿಂದ ವರದಿ ಪಡೆದು ಅಂತಹ ಕೇಂದ್ರಗಳ ಲೈಸನ್ಸ್ ರದ್ದುಪಡಿಸಿ ಮಾಲೀಕರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು..
ಜಿಲ್ಲಾಧಿಕಾರಿ ನಿತೇಶ್ ಪಾಟೀಲ್
ಕೋಚಿಂಗ್ ಸೆಂಟರ್, ಪಿಜಿ ಕೇಂದ್ರ ದಿನದ 24 ಗಂಟೆ ತೆರೆದಿರುವ ಲೈಬ್ರರಿಗಳ ಮಾಲೀಕರ ಹಾಗೂ ನಿರ್ವಾಹಕರ ಸಭೆ ನಡೆಸಿ ಡಿಸಿ ಮಾತನಾಡಿದರು. ಕರ್ನಾಟಕ ಸರ್ಕಾರ ಕೊರೊನಾ 2ನೇ ಅಲೆ ತಡೆಯುವ ಸಲುವಾಗಿ ಆರೋಗ್ಯ ಸುರಕ್ಷತಾ ಮಾರ್ಗಸೂಚಿಗಳನ್ನು ನೀಡಿದೆ.
ನಿಮ್ಮಲ್ಲಿ ಕೊರೊನಾ ನಿಯಮಗಳು ಪಾಲನೆ ಆಗುತ್ತಿಲ್ಲ. ಪಾಲಿಕೆ ಹಾಗೂ ಪೊಲೀಸ್ ಇಲಾಖೆಯಿಂದ ವರದಿ ಪಡೆದು ಅಂತಹ ಕೇಂದ್ರಗಳ ಲೈಸನ್ಸ್ ರದ್ದುಪಡಿಸಿ ಮಾಲೀಕರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.