ಬೆಳಗಾವಿ :ಮಹಾನಗರ ಪಾಲಿಕೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಬೆನ್ನಲ್ಲೇ ಭಿನ್ನಮತ ಸ್ಫೋಟಗೊಂಡಿದೆ. ಕಾರ್ಯಕರ್ತನೊಬ್ಬ ಬಿಜೆಪಿ ನಾಯಕರ ವಿರುದ್ಧ ಅವಾಚ್ಯ ಶಬ್ಧಗಳಿಂದ ಆಕ್ರೋಶ ಹೊರ ಹಾಕಿದ ಘಟನೆ ನಡೆದಿದೆ.
ನಗರದ ಖಾಸಗಿ ಹೋಟೆಲ್ನಲ್ಲಿ ಬೆಳಗಾವಿ ಉಸ್ತುವಾರಿ, ಶಾಸಕ ಅಭಯ್ ಪಾಟೀಲ 58 ವಾರ್ಡ್ಗಳ ಪೈಕಿ ಮೊದಲ ಹಂತದಲ್ಲಿ 21 ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿದ್ದರು. ಇದೀಗ ಬೆಳಗಾವಿ ಉತ್ತರ ಮತ್ತು ಮತಕ್ಷೇತ್ರದ ವಾರ್ಡ್ ನಂಬರ್ 35ರ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಭಿನ್ನಮತ ಸ್ಫೋಟಗೊಂಡಿದೆ.