ಬೆಳಗಾವಿ:ಕಳೆದ ಒಂದು ವಾರದ ಹಿಂದೆ ಪ್ಲಾಸ್ಟಿಕ್ ಕವರ್ನಲ್ಲಿ ಸಿಕ್ಕಿದ್ದ ನವಜಾತ ಶಿಶುವನ್ನು ಮರಕ್ಕೆ ನೇತು ಹಾಕಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೋಕ್ಸೋ ಪ್ರಕರಣದಡಿ ಒಬ್ಬ ಆರೋಪಿಯನ್ನ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ನೆರಸಾ - ಗೌಳಿವಾಡ ಗ್ರಾಮದ ಮಲ್ಲು ಪಿಂಗಳೆ (19) ಬಂಧಿತ ಆರೋಪಿಯಾಗಿದ್ದಾನೆ. ಪ್ರಕರಣದ ಹಿನ್ನೆಲೆ ನೋಡುವುದಾದರೆ, ಕಳೆದ ಆರು ದಿನಗಳ ಹಿಂದೆ (ಆ.25ರಂದು) ಪ್ಲ್ಯಾಸ್ಟಿಕ್ ಚೀಲದಲ್ಲಿ ನವಜಾತ ಶಿಶುವನ್ನು ಮರಕ್ಕೆ ನೇತು ಹಾಕಲಾಗಿತ್ತು. ಈ ವೇಳೆ ಮಗುವನ್ನು ರಕ್ಷಣೆ ಮಾಡಿದ ಆಶಾ ಕಾರ್ಯಕರ್ತೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಇದಾದ ಬಳಿಕ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಖಾನಾಪೂರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.