ಬೆಳಗಾವಿ :ಹಳೆ ವೈಷಮ್ಯದ ಹಿನ್ನೆಲೆ ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ವ್ಯಕ್ತಿಯೋರ್ವನ ಕೊಲೆ ಮಾಡಿರುವ ಘಟನೆ ಚೆನ್ನಮ್ಮ ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ತಿಗಡೊಳ್ಳಿ ಗ್ರಾಮದ ವಿಜಯ್ ರಾಮಚಂದ್ರಪ್ಪ ಆರೇರ್ (35) ಕೊಲೆಯಾದ ವ್ಯಕ್ತಿ. ಅದೇ ಗ್ರಾಮದ ವ್ಯಕ್ತಿಯೊಬ್ಬರ ನಡುವೆ ನಿನ್ನೆ ರಾತ್ರಿ ಮಾತಿನ ಚಕಮಕಿ ನಡೆದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಇಬ್ಬರು ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ.
ತೀವ್ರ ಗಾಯಗೊಂಡಿದ್ದ ವಿಜಯ್ನನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಕುಟುಂಬಸ್ಥರು ದಾಖಲಿಸಿದ್ದರು. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ವಿಜಯ್ ಸಾವನ್ನಪ್ಪಿದ್ದಾನೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.