ಬೆಳಗಾವಿ: ಮನೆ ಬಾಗಿಲು ಒಡೆದು ಒಳ ನುಗ್ಗಿದ ಏಂಟು ಜನ ದುಷ್ಕರ್ಮಿಗಳ ಗುಂಪೊಂದು ಮನೆಯಲ್ಲಿದ್ದವರ ಮೇಲೆ ಹಲ್ಲೆ ಮಾಡಿದ್ದಾರೆ. ಅಲ್ಲದೆ, ಕುಟುಂಬದವರನ್ನು ಕೂಡಿ ಹಾಕಿ 23 ಲಕ್ಷ ಹಣ, 120 ಗ್ರಾಂ ಚಿನ್ನಾಭರಣ ದೋಚಿಕೊಂಡು ಪರಾರಿ ಆಗಿರುವ ಘಟನೆ ರಾಮದುರ್ಗ ತಾಲೂಕಿನ ಬನ್ನೂರು ಗ್ರಾಮದಲ್ಲಿ ನಡೆದಿದೆ.
ರಾಮದುರ್ಗ ತಾಲೂಕಿನ ಬನ್ನೂರ ತಾಂಡಾದಲ್ಲಿನ ಗ್ರಾಮ ಪಂಚಾಯಿತಿ ಅಧ್ಯಕ್ಷರ ಮನೆಯಲ್ಲಿ ದರೋಡೆ ಮಾಡಲಾಗಿದೆ. ನಿನ್ನೆ ಮಧ್ಯರಾತ್ರಿ ಮನೆ ಬಾಗಿಲು ಒಡೆದು ಒಳನುಗ್ಗಿದ ಎಂಟು ಜನ ದುಷ್ಕರ್ಮಿಗಳಿಂದ 23 ಲಕ್ಷ ಹಣ, 120 ಗ್ರಾಂ ಚಿನ್ನಾಭರಣ ದರೋಡೆ ಮಾಡಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ್ ರಜಪೂತ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದೆ.