ಬೆಳಗಾವಿ:ಪಾಕ್ ಪರ ಘೋಷಣೆ ಕೂಗಿದ ಕಾಶ್ಮೀರ್ ಮೂಲದ ವಿದ್ಯಾರ್ಥಿಗಳ ಭೇಟಿಗಾಗಿ ಅವರ ಪರ ವಕೀಲರು ಹಿಂಡಲಗಾ ಜೈಲಿಗೆ ಭೇಟಿ ನೀಡುತ್ತಿದ್ದಾರೆ.
ಪಾಕ್ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳ ಭೇಟಿಗೆ ವಕೀಲರ ಆಗಮನ: ಹಿಂಡಲಗಾ ಜೈಲಿಗೆ ಪೊಲೀಸ್ ಭದ್ರತೆ - ಬೆಳಗಾವಿಯ ಹಿಂಡಲಗಾ ಜೈಲು
ಪಾಕ್ ಪರ ಘೋಷಣೆ ಕೂಗಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಮೂವರು ವಿದ್ಯಾರ್ಥಿಗಳ ಭೇಟಿಗೆ ವಕೀಲರು ಬರುತ್ತಿದ್ದಾರೆ. ಈ ಹಿನ್ನೆಲೆ ಜೈಲಿನ ಆವರಣದಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.
ಹಿಂಡಲಗಾ ಜೈಲಿಗೆ ಪೊಲೀಸ್ ಭದ್ರತೆ
ಈ ಹಿನ್ನೆಲೆಯಲ್ಲಿ ಜೈಲಿನ ಆವರಣದಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಬೆಳಗಾವಿ ಗ್ರಾಮೀಣ ಠಾಣೆಯ ಪೊಲೀಸರು ಹಿಂಡಲಗಾ ಜೈಲಿಗೆ ಭದ್ರತೆ ಒದಗಿಸಿದ್ದಾರೆ. ಗ್ರಾಮೀಣ ಠಾಣೆ ಪಿಎಸ್ಐ ಕೃಷ್ಣವೇಣಿ ನೇತೃತ್ವದಲ್ಲಿ 20ಕ್ಕೂ ಅಧಿಕ ಪೊಲೀಸರು ಭದ್ರತೆಗೆ ನಿಯೋಜನೆಗೊಂಡಿದ್ದಾರೆ.
ಹುಬ್ಬಳ್ಳಿಯ ಕೆಎಲ್ಇ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳು ಪಾಕ್ ಪರ ಘೋಷಣೆ ಕೂಗಿದ ಆರೋಪ ಎದುರಿಸುತ್ತಿದ್ದಾರೆ. ಮೂವರು ಆರೋಪಿಗಳನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ರವಾನಿಸಲಾಗಿದೆ. ಈ ಕಾರಣಕ್ಕೆ ವಿದ್ಯಾರ್ಥಿಗಳ ಭೇಟಿಗಾಗಿ ವಕೀಲರು ಆಗಮಿಸುತ್ತಿದ್ದಾರೆ.