ಬೆಳಗಾವಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದ ಮಾಧ್ಯಮ ಬುಲೆಟಿನ್ನಲ್ಲಿ ಬೆಳಗಾವಿಯ ಮೂವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಗಡಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ.
ಬೆಳಗಾವಿಯಲ್ಲಿ ಮತ್ತೆ ಮೂವರಿಗೆ ಸೋಂಕು; ಪೀಡಿತರ ಸಂಖ್ಯೆ 54ಕ್ಕೆ ಏರಿಕೆ - Belagavi News
ಗಡಿ ಜಿಲ್ಲೆ ಬೆಳಗಾವಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ದೆಹಲಿಯ ಧರ್ಮಸಭೆಯಲ್ಲಿ ಪಾಲ್ಗೊಂಡು ಬಂದಿದ್ದ 20 ವರ್ಷದ ಸೋಂಕಿತ ಯುವಕನೊಂದಿಗೆ ದ್ವಿತೀಯ ಸಂಪರ್ಕ ಹೊಂದಿದ್ದ ಮೂವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೊರೊನಾ ಪೀಡಿತರ 54ಕ್ಕೆ ಏರಿಕೆಯಾಗಿದೆ.
ಹೊಸದಾಗಿ ಸೋಂಕು ಕಾಣಿಸಿಕೊಂಡ ಮೂವರು ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದವರು. ದೆಹಲಿಯ ತಬ್ಲಿಘಿ ಧರ್ಮಸಭೆಯಲ್ಲಿ ಪಾಲ್ಗೊಂಡು ಬಂದಿದ್ದ 20 ವರ್ಷದ ಸೋಂಕಿತ ಯುವಕನೊಂದಿಗೆ ಈ ಮೂವರು ದ್ವಿತೀಯ ಸಂಪರ್ಕ ಹೊಂದಿದ್ದರು ಎನ್ನಲಾಗುತ್ತಿದೆ.
20 ವರ್ಷ ವಯಸ್ಸಿನ ಯುವಕ, 8 ವರ್ಷದ ಬಾಲಕ ಹಾಗೂ 30 ವರ್ಷದ ಮಹಿಳೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ 54 ಕೊರೊನಾ ಪ್ರಕರಣ ಬೆಳಕಿಗೆ ಬಂದಿದ್ದು, ನಾಲ್ವರು ಗುಣಮುಖರಾಗಿದ್ದಾರೆ. ಓರ್ವ ವೃದ್ಧೆ ಮೃತಪಟ್ಟಿದ್ದು, 49 ಆ್ಯಕ್ಟಿವ್ ಪ್ರಕರಣಗಳಿವೆ. ಈ ಎಲ್ಲ ಸೋಂಕಿತರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.