ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಐಎಂಐಎಂ(AIMIM) ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಅವರ ಪರ ಪ್ರಚಾರಕ್ಕಾಗಿ ಎಐಎಂಐಎಂ ಸಂಸ್ಥಾಪಕ, ಸಂಸದ ಅಸಾದುದ್ದೀನ್ ಓವೈಸಿ ಇಂದು ನಗರಕ್ಕೆ ಆಗಮಿಸಿದ್ದಾರೆ.
ಹೈದರಾಬಾದ್ನಿಂದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಓವೈಸಿ ಬಳಿಕ ರಸ್ತೆ ಮಾರ್ಗವಾಗಿ ಖಾಸಗಿ ಹೋಟೆಲ್ಗೆ ಆಗಮಿಸಿದ್ದಾರೆ. ನೂರಾರು ಎಐಎಂಐಎಂ ಕಾರ್ಯಕರ್ತರು ಸಂಸದ ಅಸಾದುದ್ದೀನ್ ಓವೈಸಿ ಅವರನ್ನು ಸ್ವಾಗತಿಸಿದರು. ಓವೈಸಿ ಹಾಗೂ ಎಐಎಂಐಎಂ ಪರ ಘೋಷಣೆ ಕೂಗಿ ಕಾರ್ಯಕರ್ತರು ಸಂಭ್ರಮಿಸಿದರು.