ಬೆಳಗಾವಿ:ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಹೆಚ್ಚುತ್ತಿರುವ ಇಂಧನ ಬೆಲೆ ಇಳಿಕೆ ಮಾಡುವಂತೆ ಆಗ್ರಹಿಸಿ ಎಐಟಿಯುಸಿ ಸಂಘಟನೆ ಹಾಗೂ ಕಮ್ಯುನಿಸ್ಟ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.
ಇಂಧನ ಬೆಲೆ ಇಳಿಕೆಗೆ ಆಗ್ರಹಿಸಿ ಎಐಟಿಯುಸಿ ಪ್ರತಿಭಟನೆ
ಕೊರೊನಾ ಲಾಕ್‍ಡೌನ್‍ನಿಂದ ದೇಶದ ಜನರು ತೀವ್ರ ಸಂಕಷ್ಟದಲ್ಲಿದ್ದು, ಇಂತಹ ಪರಿಸ್ಥಿತಿಯಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮಾಡುತ್ತಿರುವುದು ಖಂಡನೀಯ. ಸರ್ಕಾರ ಈ ಕೂಡಲೇ ಇಂಧನ ಬೆಲೆ ಕಡಿಮೆಗೊಳಿಸಬೇಕು ಎಂದು ಎಐಟಿಯುಸಿ ಸಂಘಟನೆ ಹಾಗೂ ಕಮ್ಯುನಿಸ್ಟ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.
ಕೊರೊನಾ ಲಾಕ್‍ಡೌನ್‍ನಿಂದ ದೇಶದ ಜನರು ತೀವ್ರ ಸಂಕಷ್ಟದಲ್ಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮಾಡುತ್ತಿರುವುದು ಖಂಡನೀಯ. ಸರ್ಕಾರ ಈ ಕೂಡಲೇ ಇಂಧನ ಬೆಲೆ ಕಡಿಮೆಗೊಳಿಸಬೇಕು ಎಂದು ಒತ್ತಾಯಿಸಿದರು. ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲೋತ್ಪನ್ನಗಳ ಬೆಲೆ ಕಡಿಮೆಯಿದ್ದರೂ, ಕೇಂದ್ರ ಸರ್ಕಾರ ಕಳೆದ 13 ದಿನಗಳಿಂದ ಪ್ರತಿನಿತ್ಯ ಇಂಧನ ಬೆಲೆ ಹೆಚ್ಚಿಸುತ್ತಿದೆ. ಅಲ್ಲದೇ, ಜೀವನಾವಶ್ಯಕ ವಸ್ತುಗಳ ಬೆಲೆಯೂ ಗಗನಕೇರುತ್ತಿದೆ. ಇದರಿಂದ ದೇಶದ ಜನಸಾಮಾನ್ಯರಿಗೆ ಸಾಕಷ್ಟು ಹೊರೆಯಾಗುತ್ತಿದೆ ಎಂದರು.
ಇದೇ ವೇಳೆ ಕೊರೊನಾ ಹೋರಾಟದಲ್ಲಿ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ 3 ಸಾವಿರ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ 5 ಸಾವಿರ ಪ್ಯಾಕೇಜ್ ಘೋಷಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ, ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗೆ ಮನವಿ ಸಲ್ಲಿಸಲಾಯಿತು.