ಬೆಳಗಾವಿ:ಕಟ್ಟಡ ಕಾರ್ಮಿಕರಿಗೆ ಹಾಗೂ ಹೊಸದಾಗಿ ನೋಂದಾಯಿಸಿದ ಕಾರ್ಮಿಕರಿಗೂ ಕೋವಿಡ್ ಸಹಾಯ ಧನ ಖಾತ್ರಿಪಡಿಸುವಂತೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕಾರ್ಮಿಕರಿಗೂ ಕೋವಿಡ್ ಸಹಾಯ ಧನ ಖಾತ್ರಿಪಡಿಸಲು ಎಐಯುಟಿಯುಸಿ ಪ್ರತಿಭಟನೆ ಕೊರೊನಾ ಸಂಕಷ್ಟದ ಸಮಯದಲ್ಲಿ ಬದುಕುವುದೇ ದುಸ್ತರವಾಗಿದೆ. ಅಲ್ಲದೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಮಿಕರಿಗೆ ಬಿಡುಗಡೆ ಮಾಡಿದ 5 ಸಾವಿರ ರೂ. ಪರಿಹಾರ ಧನ ಬಹುತೇಕ ಕಾರ್ಮಿಕರಿಗೆ ತಲುಪಿಲ್ಲ ಎಂದು ಆರೋಪಿಸಿದರು.
ಹಾಗೆಯೇ ಕೋವಿಡ್ ಸೋಂಕಿನಿಂದ ಬಳಲುತ್ತಿರುವ ಕಾರ್ಮಿಕರ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಹಾಗೂ ಕೂಡಲೇ ಎಲ್ಲ ಕ್ಲೇಮ್ಗಳನ್ನು ವಿಲೇವಾರಿ ಮಾಡುವಂತೆ ಒತ್ತಾಯಿಸಿದರು.
ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆ ಅಡಿಯಲ್ಲಿ 5 ಲಕ್ಷ ರೂಪಾಯಿ ಸಾಲ ನೀಡಬೇಕು. ಈ ಸಾಲ ಪಡೆಯಲು ಹೆಚ್ಚಿನ ಷರತ್ತುಗಳನ್ನು ವಿಧಿಸಲಾಗಿದೆ. ಇದರಿಂದ ಕಾರ್ಮಿಕರಿಗೆ ತೊಂದರೆ ಉಂಟಾಗಿದೆ ಎಂದು ಎಐಯುಟಿಯುಸಿ ಜಿಲ್ಲಾ ಸಂಚಾಲಕ ರಾಜು ಗಾಣಗಿ ಆರೋಪಿಸಿದರು.