ಕರ್ನಾಟಕ

karnataka

ETV Bharat / state

ಮಹಾರಾಷ್ಟ್ರ ಚುನಾವಣಾ ಕಾವು: ಹುಕ್ಕೇರಿ ಬಳಿ ಅಕ್ರಮ ಮದ್ಯ ಸಾಗಿಸುತ್ತಿದ್ದ ವಾಹನ ವಶಕ್ಕೆ

ಮಹಾರಾಷ್ಟ್ರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಾಗಿಸುತ್ತಿದ್ದ ಅಕ್ರಮ ಮದ್ಯವನ್ನು ಬೆಳಗಾವಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ವಸ್ತುಗಳ ಜೊತೆ ವ್ಯಾಪಾರಿ

By

Published : Sep 27, 2019, 1:49 PM IST

ಚಿಕ್ಕೋಡಿ:ಗೋವಾ ಮದ್ಯವನ್ನು ಆಕ್ರಮವಾಗಿ ನೆರೆಯ ಮಹಾರಾಷ್ಟ್ರ ರಾಜ್ಯಕ್ಕೆ ಸಾಗಿಸುತ್ತಿರುವಾಗ ಹುಕ್ಕೇರಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ–4ರಲ್ಲಿ ಗೂಡ್ಸ್‌ ವಾಹನದಲ್ಲಿ 3.49 ಲಕ್ಷ ಮೌಲ್ಯದ ಗೋವಾ ಮದ್ಯವನ್ನು ಅಬಕಾರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮದ್ಯವನ್ನು ವಶಕ್ಕೆ ಪಡೆದು ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಸಿಂಧದುರ್ಗ ಜಿಲ್ಲೆ ಸಾವಂತವಾಡಿಯ ವಿಶಾಲ ಜಯವಂತ ಕುಡತರಕರ (26) ಬಂಧಿತ. ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗಾಗಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ.

ಬೆಳಗಾವಿ ವಿಭಾಗದ ಅಬಕಾರಿ ಜಂಟಿ ಆಯುಕ್ತ ಡಾ. ವೈ. ಮಂಜುನಾಥ, ಅಬಕಾರಿ ಉಪ ಆಯುಕ್ತ ಕೆ. ಅರುಣಕುಮಾರ ಮಾರ್ಗದರ್ಶನದಲ್ಲಿ ಚಿಕ್ಕೋಡಿ ವಿಭಾಗದ ಅಬಕಾರಿ ಉಪ ಅಧೀಕ್ಷಕ ವಿಜಯಕುಮಾರ್​ ಜೆ. ಹಿರೇಮಠ ನೇತೃತ್ವದಲ್ಲಿ ಅಬಕಾರಿ ಇನ್‌ಸ್ಪೆಕ್ಟರ್‌ ಬಸವರಾಜ ಕರಮಣ್ಣನವರ‌ ಕಾರ್ಯಾಚರಣೆ ನಡೆಸಿ, ವಾಹನ ಹಾಗೂ 3.49 ಲಕ್ಷ ಮೌಲ್ಯದ ಮದ್ಯ ಸೇರಿ ಒಟ್ಟು 6.49 ಲಕ್ಷ ರೂ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ABOUT THE AUTHOR

...view details