ಕರ್ನಾಟಕ

karnataka

ETV Bharat / state

ಬೆಳಗಾವಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಇಬ್ಬರ ಬಂಧನ - ಸಾಮೂಹಿಕ ಅತ್ಯಾಚಾರ ಆರೋಪ ಇಬ್ಬರ ಬಂಧನ

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಕೆಟ್ ಪೊಲೀಸರು ಇಬ್ಬರು ಆರೋಪಿಗಳನ್ನ‌ ಬಂಧಿಸಿದ್ದಾರೆ.

Belagavi
ಬೆಳಗಾವಿ

By

Published : Sep 6, 2022, 10:47 PM IST

ಬೆಳಗಾವಿ: ಮಹಿಳೆಯ ಮೇಲೆ ಇಬ್ಬರು ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಕೆಟ್ ಪೊಲೀಸರು ಇಬ್ಬರು ಆರೋಪಿಗಳನ್ನ‌ ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಾಸ್ತಮರಡಿ ಗ್ರಾಮದ ಯಲ್ಲಪ್ಪ ನಾಯಕ್ ಮತ್ತು ಆತನ ಗೆಳೆಯ ದುರ್ಗೇಶ ಬಂಧಿತ ಆರೋಪಿಗಳು. ಸದ್ಯ ಇಬ್ಬರು ಆರೋಪಿಗಳು ಬೆಳಗಾವಿ ನಗರದಲ್ಲಿ ವಾಸವಾಗಿದ್ದಾರೆ.

ಪ್ರಕರಣದ ಹಿನ್ನೆಲೆ: ಆರೋಪಿಗಳು ನಗರದ ಸಿಬಿಟಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯನ್ನು ಅನಿಗೋಳಕ್ಕೆ ಕರೆದುಕೊಂಡು ಹೋಗುವುದಾಗಿ ಸುಳ್ಳು ಹೇಳಿ ನಂಬಿಸಿದ್ದಾರೆ. ಬಳಿಕ ಅನಿಗೋಳ ಮನೆಯೊಂದರಲ್ಲಿ ಕೂಡಿಹಾಕಿ ಇಬ್ಬರು ಅತ್ಯಾಚಾರ ನಡೆಸಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

ಅತ್ಯಾಚಾರಕ್ಕೊಳಗಾದ ಮಹಿಳೆ ಮೂಲತಃ ಬೆಳಗಾವಿ ನಗರದವಳಾಗಿದ್ದು ನಾಲ್ಕು ವರ್ಷದ ಹಿಂದೆ ಮಹಾರಾಷ್ಟ್ರದ ಶಿರೋಳ ತಾಲೂಕಿನ ಗ್ರಾಮವೊಂದರ ಯುವಕನ ಜೊತೆಗೆ ಮದುವೆಯಾಗಿತ್ತು. ಎರಡು ವರ್ಷದ ಹಿಂದೆ ಗಂಡ ತೀರಿಕೊಂಡ ಹಿನ್ನೆಲೆ ಮಹಿಳೆ ಗಂಡನ ಮನೆ‌ ಮತ್ತು ಬೆಳಗಾವಿಯಲ್ಲಿರುವ ತವರು ಮನೆಯಲ್ಲಿ ನೆಲೆಸಿದ್ದಳಂತೆ.

ಅತ್ಯಾಚಾರಕ್ಕೊಳಗಾದ ಮಹಿಳೆ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಹಿಳೆ ನೀಡಿದ ದೂರಿನ ಮೇರೆಗೆ ಮಾರ್ಕೆಟ್ ಸಿಪಿಐ ಮಾರ್ಗದರ್ಶನದಲ್ಲಿ ಪಿಎಸ್ಐ ವಿಠ್ಠಲ ಹಾವನ್ನವರ ತಂಡ ಇಬ್ಬರು ಆರೋಪಿಗಳನ್ನ ಬಂಧಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದಾರೆ. ಸದ್ಯ ತನಿಖೆ ಮುಂದುವರೆದಿದೆ.

ಇದನ್ನೂ ಓದಿ:ದೆಹಲಿ ಪೊಲೀಸರಿಂದ ಭರ್ಜರಿ ಬೇಟೆ.. 1200 ಕೋಟಿ ಮೌಲ್ಯದ ಡ್ರಗ್ಸ್​ ಜಪ್ತಿ, ಇಬ್ಬರು ಆಫ್ಘನ್ನರ ​ಬಂಧನ

ABOUT THE AUTHOR

...view details