ಬೆಳಗಾವಿ :ಹೆಚ್.ವಿಶ್ವನಾಥ್ ಸಚಿವರಾಗಲು ಅನರ್ಹ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದಕ್ಕೆ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಹೆಚ್ ವಿಶ್ವನಾಥ್ ಪ್ರಕರಣದಲ್ಲಿ ಏನು ತೀರ್ಪು ಬಂದಿದೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ.
ಕಾನೂನು ತಜ್ಞರ ಜತೆ ಚರ್ಚಿಸಿ ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ. ಕಳೆದ ಡಿಸೆಂಬರ್ನಲ್ಲಿ ಚುನಾವಣೆ ಪ್ರಕ್ರಿಯೆ ಆರಂಭವಾಗಿತ್ತು. ಸ್ಪೀಕರ್ ಅವರ ತೀರ್ಪಿನ ಬಗ್ಗೆ ಕೊನೆ ಗಳಿಗೆಯಲ್ಲಿ ಆರ್ಡರ್ ಆಯಿತು.