ಬೆಳಗಾವಿ: ಕೋವಿಡ್-19 ಹಿನ್ನೆಲೆಯಲ್ಲಿ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿ ಪ್ರಕಾರ ಬಕ್ರೀದ್ ಹಬ್ಬ ಆಚರಣೆ ಮಾಡಬೇಕು. ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಜಿಲ್ಲಾಡಳಿತದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಇಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ, ಕರ್ನಾಟಕ ಸರ್ಕಾರ ಕೋವಿಡ್ ಹಿನ್ನೆಲೆ ಈಗಾಗಲೇ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಈ ಪ್ರಕಾರ ಬಕ್ರೀದ್ ಹಬ್ಬವನ್ನು ಆಚರಣೆ ಮಾಡಬೇಕು ಎಂದರು.