ಬೆಳಗಾವಿ:ಇಂದಿನ ಯುವ ಸಮುದಾಯ ಅಂಬೇಡ್ಕರ್ ಆದರ್ಶಗಳು, ತತ್ವಗಳನ್ನು ಪಾಲಿಸಿಕೊಂಡು ಹೋಗುವ ಮೂಲಕ ಸದೃಢ ಭಾರತ ನಿರ್ಮಾಣದಲ್ಲಿ ಕೈಜೋಡಿಸಬೇಕು ಎಂದು ಶಾಸಕ ಅನಿಲ್ ಬೆನಕೆ ಕರೆ ನೀಡಿದ್ದಾರೆ.
ಯುವ ಸಮುದಾಯ ಅಂಬೇಡ್ಕರ್ ಆದರ್ಶ-ತತ್ವಗಳನ್ನು ಪಾಲಿಸಲಿ: ಶಾಸಕ ಅನಿಲ್ ಬೆನಕೆ - Ambedkar Maha Parinirvana day celebration in belgavi
ಬೆಳಗಾವಿಯಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಅವರ 64ನೇ ಮಹಾಪರಿನಿರ್ವಾಣ ದಿನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ನಗರದ ಅಂಬೇಡ್ಕರ್ ರಸ್ತೆಯಲ್ಲಿರುವ ಅಂಬೇಡ್ಕರ್ ಗಾರ್ಡನ್‌ನಲ್ಲಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ವಿವಿಧ ದಲಿತ ಸಂಘಟನೆ ಆಶ್ರಯದಲ್ಲಿ ಅಂಬೇಡ್ಕರ್ ಅವರ 64ನೇ ಮಹಾಪರಿನಿರ್ವಾಣ ದಿನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಓದಿ:ಕುಮಾರಸ್ವಾಮಿ ಲೂಸ್ ಟಾಕ್ ಕಡೆಗಣಿಸಲು ತೀರ್ಮಾನ: ಹೆಚ್ಡಿಕೆ ಅಸ್ತ್ರಕ್ಕೆ ಕಾಂಗ್ರೆಸ್ ಪ್ರತ್ಯಸ್ತ್ರ ತಂತ್ರ
ಬಳಿಕ ಮಾತನಾಡಿದ ಶಾಸಕ ಅನಿಲ್ ಬೆನಕೆ, ಬೆಳಗಾವಿಗೂ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೂ ಅವಿನಾಭಾವ ಸಂಬಂಧವಿತ್ತು. ಹೀಗಾಗಿ, ಬೆಳಗಾವಿ ಪುಣ್ಯ ನಗರವಾಗಿದೆ. ಇಂದಿನ ಯುವ ಸಮುದಾಯ ಅಂಬೇಡ್ಕರ್ ಆದರ್ಶಗಳು, ಅವರ ತತ್ವಗಳನ್ನು ಪಾಲಿಸಿಕೊಂಡು ಹೋಗುವ ಮೂಲಕ ಸದೃಢ ಭಾರತ ನಿರ್ಮಾಣದಲ್ಲಿ ಕೈಜೋಡಿಸಬೇಕು ಎಂದರು.
TAGGED:
ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ