ಬೆಳಗಾವಿ: ಜನವರಿ 17ರ ಮಧ್ಯಾಹ್ನ 3ಕ್ಕೆ ಅಮಿತ್ ಶಾ ಜಿಲ್ಲೆಗೆ ಆಗಮಿಸಲಿದ್ದಾರೆ. ಜನಸೇವಕ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ಇಲ್ಲಿನ ನೆಹರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಬಿಜೆಪಿ ಸಮಾವೇಶದಲ್ಲಿ ಅಮಿತ್ ಶಾ ಭಾಗವಹಿಸಲಿರುವುದರಿಂದ ಕಾರ್ಯಕ್ರಮ ನಡೆಯುವ ಸ್ಥಳವನ್ನು ಸಚಿವ ರಮೇಶ್ ಜಾರಕಿಹೊಳಿ ಪರಿಶೀಲಿಸಿ ನಂತರ ಮಾಧ್ಯಮದೊಂದಿಗೆ ಮಾತನಾಡಿದರು.
ಅಮಿತ್ ಶಾ ಭೇಟಿ ಹಿನ್ನೆಲೆ ಸಚಿವ ರಮೇಶ್ ಜಾರಕಿಹೊಳಿಯಿಂದ ಸ್ಥಳ ಪರಿಶೀಲನೆ 2 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಕೊರೊನಾ ಮುಂಜಾಗ್ರತೆ ಹಾಗೂ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಯೇ ಕಾರ್ಯಕ್ರಮ ಸಂಘಟಿಸಲಾಗುತ್ತಿದೆ. ಅಮಿತ್ ಶಾ ಭೇಟಿ ಸಂದರ್ಭದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಟಿಕೆಟ್ ಬಗ್ಗೆ ಚರ್ಚೆ ಆಗಲ್ಲ. ಸಮಾರಂಭದ ಬಳಿಕ ಖಾಸಗಿ ಹೋಟೆಲ್ನಲ್ಲಿ ಹಿರಿಯ ನಾಯಕರ ಜತೆಗೆ ಶಾ ಸಭೆ ನಡೆಸುವ ಸಾಧ್ಯತೆ ಇದೆ. ಆದರೆ ಸಭೆ ಬಗ್ಗೆ ಇನ್ನೂ ನಿರ್ಣಯವಾಗಿಲ್ಲ ಎಂದು ಮಾಹಿತಿ ನೀಡಿದರು.
ಓದಿ:ಸಂಪುಟ ವಿಸ್ತರಣೆ ಕುರಿತಂತೆ ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ: ಶಶಿಕಲಾ ಜೊಲ್ಲೆ
ಪ್ರಧಾನಿ ನರೇಂದ್ರ ಮೋದಿ ಅವರ ಸಹಕಾರ ಹಾಗೂ ಪ್ರೋತ್ಸಾಹದ ಕಾರಣ ದೇಶದಲ್ಲಿ ಕೊರೊನಾ ಲಸಿಕೆ ಅನ್ವೇಷಣೆಗೊಂಡಿದೆ. ಲಸಿಕೆಯಿಂದ ಕೊರೊನಾ ಮಾಹಾಮಾರಿ ತೊಲಗಲಿದೆ. ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರು, ಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿದ್ದೇನೆ. ಶಾಸಕ ಬಸನಗೌಡ ಪಾಟೀಲ್ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಲ್ಲ. ಆದರೆ ಮುಂದಿನ ಎರಡೂವರೆ ವರ್ಷ ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯುತ್ತಾರೆ. ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರ ಜೊತೆ ಚರ್ಚಿಸಿ ಸಿಎಂ ತೀರ್ಮಾನ ಮಾಡುತ್ತಾರೆ ಎಂದರು.