ಬೆಳಗಾವಿ:ಕುಂದಾನಗರಿಯಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆ ಹಿನ್ನಲೆಯಲ್ಲಿ ನಗರದ ಅನೇಕ ಕಡೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು. ನಡು ರಸ್ತೆಯಲ್ಲಿ ಸುಮಾರು 30 ನಿಮಿಷ ಆಂಬ್ಯುಲೆನ್ಸ್ ಸಿಲುಕಿ ಪರದಾಡಿದ ಘಟನೆ ನಡೆದಿದೆ.
ಕಾಂಗ್ರೆಸ್ ಪ್ರತಿಭಟನೆಯಿಂದ ನಡು ರಸ್ತೆಯಲ್ಲಿ ಆಂಬ್ಯುಲೆನ್ಸ್ ಸಿಲುಕಿ ಪರದಾಟ - An ambulance caught in the middle of the road
ಕುಂದಾನಗರಿಯಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆ ಹಿನ್ನಲೆಯಲ್ಲಿ ಸುಮಾರು 30 ನಿಮಿಷಗಳ ಕಾಲ ಆಂಬ್ಯುಲೆನ್ಸ್ ನಡು ರಸ್ತೆಯಲ್ಲಿ ಸಿಲುಕಿ ಗಾಯಾಳುಗಳು ಪರದಾಡಿದ ಘಟನೆ ನಡೆದಿದೆ.
ಆಂಬ್ಯುಲೆನ್ಸ್
ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಹಿನ್ನಲೆಯಲ್ಲಿ ಆರ್ ಟಿ ಓ ವೃತ್ತದಿಂದ ಚೆನ್ನಮ್ಮ ಸರ್ಕಲ್ ಮಾರ್ಗದಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ, ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆ ರ್ಯಾಲಿಯಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ವೇಳೆ ನಡು ರಸ್ತೆಯಲ್ಲಿ ಸುಮಾರು 30 ನಿಮಿಷಗಳ ಕಾಲ ಆಂಬ್ಯುಲೆನ್ಸ್ ಸಿಲುಕಿ ಗಾಯಾಳುಗಳು ಪರದಾಡಿದ ಘಟನೆ ನಡೆದಿದೆ. ನಂತರ ಪೊಲೀಸರು ಬೇರೆ ರಸ್ತೆ ಮುಖಾಂತರ ಆಂಬ್ಯುಲೆನ್ಸ್ಗೆ ದಾರಿ ಮಾಡಿಕೊಟ್ಟಿದ್ದಾರೆ.