ಕರ್ನಾಟಕ

karnataka

ETV Bharat / state

ರಸ್ತೆ ದುರಸ್ತಿಗೆ ಒತ್ತಾಯಿಸಿ ಬೆಳಗಾವಿ ಜನರಿಂದ ಮನವಿ - ಬೆಳಗಾವಿ

ಹಲಗಾ ಗ್ರಾಮದ ರಸ್ತೆ ಅಭಿವೃದ್ಧಿ ಪಡಿಸುವಂತೆ ಈ ಹಿಂದೆ ಅನೇಕ ಬಾರಿ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದು, ಇದರಿಂದ ಯಾವುದೇ ಪ್ರಯೋಜನವಾಗಿಲ್ಲ‌. ನಿತ್ಯ ನೂರಾರು ಜನರು ಉಪಯೋಗಿಸುವ ರಸ್ತೆ ಸಂಪೂರ್ಣ ಹಾಳಾಗಿ ಹೋಗಿದ್ದು, ಇದರಿಂದ ಸಮಸ್ಯೆ ಉಂಟಾಗುತ್ತಿದೆ.

ಮನವಿ

By

Published : Jul 31, 2019, 10:10 AM IST

ಬೆಳಗಾವಿ : ನಗರದ ಹಲಗಾ ಗ್ರಾಮದ ಮುಖ್ಯ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ಜನರು ತುಂಬಾ ಸಂಕಷ್ಟ ಎದುರಿಸುತ್ತಿದ್ದಾರೆ. ಒಂದು ತಿಂಗಳ ಒಳಗೆ ರಸ್ತೆ ದುರಸ್ತಿ ಮಾಡದಿದ್ದರೆ, ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡುತ್ತೇವೆ ಎಂದು‌ ನ್ಯಾಯವಾದಿ ಅಣ್ಣಾಸಾಹೇಬ ಘೋರ್ಪಡೆ ಎಚ್ಚರಿಕೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಹಲಗಾ ಗ್ರಾಮಸ್ಥರು. ಹಲಗಾ ಗ್ರಾಮದ ರಸ್ತೆ ಅಭಿವೃದ್ಧಿ ಪಡಿಸುವಂತೆ ಈ ಹಿಂದೆ ಅನೇಕ ಬಾರಿ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದು ಇದರಿಂದ ಯಾವುದೇ ಪ್ರಯೋಜನವಾಗಿಲ್ಲ‌. ನಿತ್ಯ ನೂರಾರು ಜನರು ಉಪಯೋಗಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು, ಇದರಿಂದ ಸಮಸ್ಯೆ ಉಂಟಾಗುತ್ತಿದೆ. ಕೂಡಲೇ ಜಿಲ್ಲಾಡಳಿತ ರಸ್ತೆ ಕಾಮಗಾರಿ ಮಾಡುವಂತೆ ನಿರ್ದೇಶನ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ರಸ್ತೆ ದುರಸ್ತಿಗೆ ಒತ್ತಾಯಿಸಿ ಮನವಿ ಪತ್ರ
ಹಲಗಾ ಬೆಳಗಾವಿ ಮಧ್ಯದ ಸರ್ವಿಸ್ ರೋಡ್​​​ನಿಂದ ಜೈನ ರುದ್ರಭೂಮಿ ಹಾಗೂ ಕನ್ನಡ ಪ್ರಾಥಮಿಕ ಶಾಲೆಯಿಂದ ಹಲಗಾ ಪಶ್ಚಿಮ ಭಾಗದವರಗೆ ಸುಮಾರು 2 ಕಿಲೋ ಮೀಟರ್ ಬಜಾರವಾಟ ರಸ್ತೆ ಸಂಪೂರ್ಣ ಹಾಳಾಗಿದ್ದು ಸಂಚಾರಿಗಳು, ಕಾರ್ಮಿಕರು ಮತ್ತು ವಿದ್ಯಾರ್ಥಿಗಳ ಪ್ರಯಾಣಕ್ಕೆ ತೊಂದರೆಯಾಗುತ್ತಿದೆ. ಈಗಾಗಲೇ ಒಮ್ಮೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ, ಒಂದು ತಿಂಗಳ ಒಳಗೆ ರಸ್ತೆ ದುರಸ್ತಿಗೆ ಮುಂದಾಗದಿದ್ದರೆ ರಸ್ತೆ ತಡೆದು ಪ್ರತಿಭಟನೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಎಚ್ಚರಿಕೆ ನೀಡಿದರು.

ABOUT THE AUTHOR

...view details