ಬೆಳಗಾವಿ: ಕೋವಿಡ್ ಸಂದರ್ಭದಲ್ಲಿ ಕರ್ತವ್ಯದಲ್ಲಿರುವ ಅಂಗನವಾಡಿ ಕಾರ್ಯಕರ್ತೆಯರ ಆರೋಗ್ಯ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಸಂಘದಿಂದ ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಅಂಗನವಾಡಿ ಕಾರ್ಯಕರ್ತೆಯರ ಆರೋಗ್ಯ ಸಂರಕ್ಷಣೆಗೆ ಆಗ್ರಹಿಸಿ ಪ್ರತಿಭಟನೆ - ಬೆಳಗಾವಿ ಪ್ರತಿಭಟನೆ ಸುದ್ದಿ
ಎಲ್ಲಾ ಕಾರ್ಯಕರ್ತೆಯರಿಗೆ ಗುಣಮಟ್ಟದ ಮಾಸ್ಕ್, ಸ್ಯಾನಿಟೈಸರ್ ವಿತರಿಸಬೇಕು. ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಅಂಗನವಾಡಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
![ಅಂಗನವಾಡಿ ಕಾರ್ಯಕರ್ತೆಯರ ಆರೋಗ್ಯ ಸಂರಕ್ಷಣೆಗೆ ಆಗ್ರಹಿಸಿ ಪ್ರತಿಭಟನೆ protest](https://etvbharatimages.akamaized.net/etvbharat/prod-images/768-512-8010762-thumbnail-3x2-bgm.jpg)
ಸಿಐಟಿಯು ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಬೆಳಗಾವಿ ತಾಲೂಕು ಘಟಕದ ಪದಾಧಿಕಾರಿಗಳು ಭಾಗಿಯಾಗಿದ್ದರು. ಕೋವಿಡ್ ನಿಯಂತ್ರಿಸಲು ಅಂಗನವಾಡಿ ಕಾರ್ಯಕರ್ತೆಯರು ಶ್ರಮಿಸುತ್ತಿದ್ದಾರೆ. ಎಲ್ಲ ಕಾರ್ಯಕರ್ತೆಯರಿಗೆ ಗುಣಮಟ್ಟದ ಮಾಸ್ಕ್, ಸ್ಯಾನಿಟೈಸರ್ ವಿತರಿಸಬೇಕು.
ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಜರುಗಿಸಬೇಕು. ನಿರ್ಭಯದಿಂದ ಕರ್ತವ್ಯ ನಿರ್ವಹಿಸಲು ಮುಕ್ತ ವಾತಾವರಣ ನಿರ್ಮಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಹೆಚ್ಚಿನ ಸಂರಕ್ಷಣಾ ಕ್ರಮಗಳನ್ನು ವಹಿಸಬೇಕು.ಅಂಗನವಾಡಿ ಕಾರ್ಯಕರ್ತೆಯರಿಗೆ ಹೇರಿರುವ ಎನ್ ಪಿಎಸ್ ರದ್ದು ಮಾಡಬೇಕು ಹಾಗೂ ನಿವೃತ್ತ ವೇತನ ನೀಡಲು ಕ್ರಮ ವಹಿಸಬೇಕು ಎಂದು ಆಗ್ರಹಿಸಿ ಡಿಸಿ ಮೂಲಕ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.