ಬೆಳಗಾವಿ: ಸಹಕಾರಿ ಕ್ಷೇತ್ರದಲ್ಲಿ ಜನರಿಗೆ ಸಹಾಯ ಮಾಡಬೇಕೆಂಬ ಹಂಬಲದಿಂದ ಮೊದಲ ಬಾರಿಗೆ ಡಿಸಿಸಿ ಬ್ಯಾಂಕ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದೇನೆ ಎಂದು ಶಾಸಕಿ ಅಂಜಲಿ ನಿಂಬಾಳ್ಕರ್ ತಿಳಿಸಿದ್ದಾರೆ.
ಜನ ಸೇವೆಗಾಗಿ ಬ್ಯಾಂಕ್ ನಿರ್ದೇಶಕ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದೇನೆ: ಅಂಜಲಿ ನಿಂಬಾಳ್ಕರ್ - ಅಂಜಲಿ ನಿಂಬಾಳ್ಕರ್
ಡಿಸಿಸಿ ಬ್ಯಾಂಕ್ ಚುನಾವಣೆಗೆ ಶಾಸಕಿ ಅಂಜಲಿ ನಿಂಬಾಳ್ಕರ್ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಸಹಕಾರಿ ಕ್ಷೇತ್ರಕ್ಕೆ ಕಾಲಿರಿಸಲು ಮುಂದಾಗಿದ್ದಾರೆ. ಮಾಜಿ ಸಚಿವ ಸತೀಶ್ ಜಾರಕಿಹೊಳಿ ಸೂಚನೆ ಮೇರೆಗೆ ನಾಮಪತ್ರ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಶಾಸಕಿ ಅಂಜಲಿ ನಿಂಬಾಳ್ಕರ್
ನಗರದಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ನಾಮಪತ್ರ ಸಲ್ಲಿಕೆ ಮಾಡಿದ ಬಳಿಕ ಮಾತನಾಡಿದ ಅವರು, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಅವರ ನೇತೃತ್ವದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ.
ಶಾಸಕಿ ಅಂಜಲಿ ನಿಂಬಾಳ್ಕರ್
ಕ್ಷೇತ್ರದ ರೈತ ಬಾಂಧವರು ನನಗೆ ಬೆಂಬಲ ನೀಡಿದ್ದು, ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಗೆಲುವು ನನ್ನದಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮೊದಲ ಬಾರಿ ಸ್ಫರ್ಧೆ ಮಾಡುತ್ತಿದ್ದೇನೆ. ಈ ಹಿಂದಿನ ನಿರ್ದೇಶಕರು ಸರಿಯಾಗಿ ಕ್ಷೇತ್ರದ ಜನರಿಗೆ ಸ್ಪಂದಿಸುವ ಕೆಲಸ ಮಾಡಿಲ್ಲ. ಹೀಗಾಗಿ ನಾನು ಕ್ಷೇತ್ರದ ಜನರಿಗಾಗಿಯೇ ಈ ಬಾರಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದರು