ಬೆಳಗಾವಿ: ಮಹಾರಾಷ್ಟ್ರದಿಂದ ಬೆಳಗಾವಿಗೆ ಆಗಮಿಸಿದ್ದ ಮಹಿಳೆಯೋರ್ವಳಿಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 147ಕ್ಕೆ ಏರಿಕೆಯಾಗಿದೆ.
ಬೆಳಗಾವಿಯಲ್ಲಿ ಇಂದು ಮತ್ತೊಂದು ಕೊರೊನಾ ಪಾಸಿಟಿವ್: ಸೋಂಕಿತರ ಸಂಖ್ಯೆ 147ಕ್ಕೆ ಏರಿಕೆ - ಬೆಳಗಾವಿ
ಮೇ 12 ರಂದು ಮಹಾರಾಷ್ಟ್ರದಿಂದ ವಾಪಸ್ ಆಗಿದ್ದ ಬೆಳಗಾವಿ ತಾಲೂಕಿನ ತುರಮುರಿ ಗ್ರಾಮದ 30 ವರ್ಷದ ಮಹಿಳೆಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಬೆಳಗಾವಿಯಲ್ಲಿ ಇಂದು ಮತ್ತೊಂದು ಕೊರೊನಾ ಪಾಸಿಟಿವ್
ಬೆಳಗಾವಿ ತಾಲೂಕಿನ ತುರಮುರಿ ಗ್ರಾಮದ 30 ವರ್ಷದ ಮಹಿಳೆಗೆ ಸೋಂಕು ತಗುಲಿದೆ. ಈ ಮಹಿಳೆ ಮೇ 12ರಂದು ಮಹಾರಾಷ್ಟ್ರದಿಂದ ಬೆಳಗಾವಿಗೆ ವಾಪಸ್ ಆಗಿದ್ದರು. ಮಹಾರಾಷ್ಟ್ರದಿಂದ ಆಗಮಿಸಿದ ಹಿನ್ನೆಲೆಯಲ್ಲಿ ಮಹಿಳೆಯನ್ನು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿಡಲಾಗಿತ್ತು.