ಬೆಳಗಾವಿ: ಕೋವಿಡ್-19 ಸೋಂಕು ತಗುಲಿದ್ದ ಮತ್ತೊಬ್ಬ ವ್ಯಕ್ತಿ ಸಂಪೂರ್ಣ ಗುಣಮುಖನಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಬಿಮ್ಸ್ ನಿರ್ದೇಶಕ ಡಾ. ವಿನಯ ದಾಸ್ತಿಕೊಪ್ಪ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮತ್ತೋರ್ವ ಕೊರೊನಾ ಸೋಂಕಿತ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ - Another patient discharged
ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತಗುಲಿದ್ದ ಮತ್ತೋರ್ವ ವ್ಯಕ್ತಿಯನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಈ ಪೈಕಿ ಸರ್ಕಾರದ ಮಾರ್ಗಸೂಚಿ ಅನ್ವಯ ಒಟ್ಟು 6 ಜನರನ್ನು ಡಿಸ್ಚಾರ್ಜ್ ಮಾಡಿದ್ದು, ಈ ಮೂಲಕ ಗಡಿ ಜಿಲ್ಲೆಯ ಜನರು ಕೊಂಚ ನಿರಾಳರಾಗಿದ್ದಾರೆ.

ಬೆಳಗಾವಿಯಲ್ಲಿ ಮತ್ತೋರ್ವ ಸೋಂಕಿತ ಗುಣಮುಖ
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಗರದ ಕ್ಯಾಂಪ್ ಪ್ರದೇಶದ ಕಸಾಯಿಗಲ್ಲಿಯ 26 ವರ್ಷದ ವ್ಯಕ್ತಿ (P-127) ಯನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ.
ಇವರು ಮಾ. 31ರಂದು ಆಸ್ಪತ್ರೆಗೆ ದಾಖಲಾಗಿದ್ದ. ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 54 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಪೈಕಿ 6 ಜನರನ್ನು ಈಗಾಗಲೇ ಸರ್ಕಾರದ ಮಾರ್ಗಸೂಚಿ ಅನ್ವಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಇದೀಗ ಒಟ್ಟಾರೆ 7 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.